ಗಂಗಾವತಿ (ಕೊಪ್ಪಳ): ‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಯೋಜನೆಗಳು ಜನರ ಮನೆಗಳನ್ನು ತಲುಪಿದರೆ, ಕಾಂಗ್ರೆಸ್ ತನ್ನ ಕೈ ಚೀಲದಲ್ಲಿ ಜನರಿಗೆ ಹಾಕಲು ಮಕ್ಮಲ್ ಟೋಪಿ ಇಟ್ಟುಕೊಂಡಿದೆ. ಜೆಡಿಎಸ್ ಕಣ್ಣೀರಿನ ಮೂಲಕ ಮರಳು ಮಾಡುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.

ಗಂಗಾವತಿ ತಾಲ್ಲೂಕಿನ ಮರಳಿಯಲ್ಲಿ ಭಾನುವಾರ ನಡೆದ ಬಳ್ಳಾರಿ ವಿಭಾಗೀಯ ಮಟ್ಟದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು ‘ಗ್ಯಾರಂಟಿ ಕಾರ್ಡ್ ಹೆಸರಿನಲ್ಲಿ ಕಾಂಗ್ರೆಸ್ ಜನರಿಗೆ ಟೋಪಿ ಹಾಕಲು ಹೊರಟಿದೆ. ಇವರ ತಂತ್ರಗಳಿಗೆ ಜನ ಕರಗುವುದಿಲ್ಲ. 50 ವರ್ಷಗಳಲ್ಲಿ ಕಾಂಗ್ರೆಸ್ ಮಾಡದ ಕೆಲಸವನ್ನು ಕಡಿಮೆ ಅವಧಿಯಲ್ಲಿ ಬಿಜೆಪಿ ಮಾಡಿ ತೋರಿಸಿದೆ’ ಎಂದರು.

‘ಪಕ್ಷದ ಅಭಿವೃದ್ಧಿ ಕೆಲಸಗಳ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದು, ಅಂಥವರಿಗೆ ಸಾಮಾಜಿಕ ತಾಣಗಳ ಮೂಲಕವೇ ನೀವೆಲ್ಲರೂ ತಿರುಗೇಟು ನೀಡಬೇಕು. ದೇಶದಲ್ಲಿ ಶೇ. 70ರಷ್ಟು ಜನರಿಗೆ ಸಾಮಾಜಿಕ ತಾಣಗಳ ಮೂಲಕವೇ ಸುದ್ದಿಗಳು ತಲುಪುತ್ತಿದ್ದು, ಇವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು’ ಎಂದರು.

’ಇದುವರೆಗೆ ಬಂದ ಚುನಾವಣಾ ಸಮೀಕ್ಞಾ ವರದಿಗಳ ಬಗ್ಗೆ ಯೋಚಿಸುವುದಿಲ್ಲ. ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಿದ ಚುಕ್ಕಾಣಿ ಹಿಡಿಯುತ್ತದೆ. ಅಲ್ಲಿಯವರೆಗೆ ನಿರಂತರವಾಗಿ ಕೆಲಸ ಮಾಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.