ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ₹10 ಕೋಟಿ ಅನುದಾನ: ಸಿಎಂ ಬೊಮ್ಮಾಯಿ

Last Updated 9 ನವೆಂಬರ್ 2021, 7:12 IST
ಅಕ್ಷರ ಗಾತ್ರ

ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ₹ 10 ಕೋಟಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ತಮ್ಮನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಈ ಭರವಸೆ ನೀಡಿದರು.

‘ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ಗೋವಾ ರಾಜ್ಯದಲ್ಲಿ ನೆಲೆಸಿದ್ದು, ಅಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ, ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ. ಇದಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ವಿಸ್ಕೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು. ಅಲ್ಲದೆ, ಕನ್ನಡ ಭವನ ನಿರ್ಮಾಣಕ್ಕೆ ₹ 10 ಕೋಟಿ ಮಂಜೂರು ಮಾಡುವಂತೆ ಆದೇಶಿಸಿದರು.

ಗೋವಾ ಕನ್ನಡ ಮಹಾ ಸಂಘದ ಗೌರವ ಅಧ್ಯಕ್ಷ ಸಿದ್ದಣ್ಣ ಮೇಟಿ, ಗೋವಾ ಕನ್ನಡ ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT