ಶುಕ್ರವಾರ, ಮೇ 7, 2021
26 °C

10ರಿಂದ 12ವರೆಗೆ ನೇರ ತರಗತಿ: ಪೋಷಕರು, ಉಪನ್ಯಾಸಕರ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆಯ ತೀವ್ರಗೊಂಡಿದ್ದರೂ ಎಸ್ಸೆಸ್ಸೆಲ್ಸಿ, ಪ್ರಥಮ, ದ್ವಿತೀಯ ಪಿಯುಸಿಗಳಿಗೆ ಶಿಕ್ಷಣ ಇಲಾಖೆ ಶಾಲೆ– ಕಾಲೇಜುಗಳಲ್ಲಿ ನೇರ ತರಗತಿ (ಆಫ್‌ಲೈನ್‌) ಮುಂದುವರಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಪದವಿಪೂರ್ವ ಕಾಲೇಜುಗಳ ನೇರ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‌ಲೈನ್‌ ತರಗತಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಲು ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ನಿರ್ಧರಿಸಿದೆ.

‘ರಾಜ್ಯದ ವಿವಿಧ ಭಾಗಗಳಲ್ಲಿ ಹತ್ತಾರು ಶಿಕ್ಷಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಈಗಾಗಲೇ ತಜ್ಞರ ಸಮಿತಿ ಕೂಡಾ ಶಾಲಾ ಕಾಲೇಜುಗಳಲ್ಲಿ ಆಫ್‌ಲೈನ್‌ ತರಗತಿಗಳನ್ನು ನಡೆಸದಂತೆ ಸಲಹೆ ನೀಡಿದೆ. ವಿವಿಧ ಇಲಾಖೆಗಳಲ್ಲಿ ಸಭೆಯನ್ನೇ ಮಾಡಬೇಡಿ ಎಂದು ಸರ್ಕಾರ ಆದೇಶ ಹೊರಡಿಸಿದೆ. ಇಂಥ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ತರಗತಿಗಳನ್ನು ಶಾಲೆಗಳಲ್ಲಿ ನಡೆಸುವುದು ಅಪಾಯಕಾರಿ’ ಎಂದೂ ಮನವಿ ಮಾಡಲು ಸಂಘ ತೀರ್ಮಾನಿಸಿದೆ.

‘ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದರೂ ರಾಜ್ಯ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ’ ಎಂದು ಪೋಷಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು