ಭಾನುವಾರ, ಜೂನ್ 26, 2022
21 °C

ಕೋವಿಡ್ ಪರೀಕ್ಷೆ ಪ್ರಯೋಗಾಲಯ: ನೌಕರರಿಗೆ ₹10 ಸಾವಿರ ಅಪಾಯ ಭತ್ಯೆ -ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಪರೀಕ್ಷೆ ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 922 ಗುತ್ತಿಗೆ ನೌಕರರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮಾಸಿಕ ಅಪಾಯ ಭತ್ಯೆ ಘೋಷಿಸಿದೆ.

ಈ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದು, ‘ಗ್ರೂಪ್ ಡಿ ನೌಕರರಿಗೆ ₹ 10 ಸಾವಿರ, ದಾದಿಯರಿಗೆ ₹ 8 ಸಾವಿರ, ಸಂಶೋಧನಾ ವಿಜ್ಞಾನಿಗಳು, ಸಂಶೋಧನಾ ಸಹಾಯಕರು, ಪ್ರಯೋಗಾಲಯದ ತಂತ್ರಜ್ಞರು ಹಾಗೂ ದತ್ತಾಂಶಗಳನ್ನು ದಾಖಲಿಸುವವರಿಗೆ ₹ 5 ಸಾವಿರ ಮಾಸಿಕ ಅಪಾಯ ಭತ್ಯೆಯನ್ನು ನೀಡಲಾಗುತ್ತದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು