ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಂತರ ವೈರಾಣು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

Last Updated 5 ಜನವರಿ 2021, 15:50 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಮತ್ತೊಬ್ಬರಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣು ಇರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಹೊಸ ಮಾದರಿಯ ಕೋವಿಡ್ ಪೀಡಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕೆಲ ದಿನಗಳ ಹಿಂದೆ ಬ್ರಿಟನ್‌ನಿಂದ ನಗರಕ್ಕೆ ಬಂದು ಕೋವಿಡ್ ಪೀಡಿತರಾದವರು ಹಾಗೂ ಸೋಂಕಿತರಾದ ಅವರ ಸಂಪರ್ಕಿತರ ಮಾದರಿಗಳನ್ನು ಜಿನೋಮಿಕ್ ಸೀಕ್ವೆನ್ಸಿಸ್ ಪರೀಕ್ಷೆಗಾಗಿ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವರಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೆಲೆಸಿದ್ದ 53 ವರ್ಷದ ಮಹಿಳೆಯೊಬ್ಬರಲ್ಲಿ ರೂಪಾಂತರಗೊಂಡ ವೈರಾಣು ಇರುವುದು ಮಂಗಳವಾರ ಖಚಿತಪಟ್ಟಿದೆ. ಇವರು ರೂಪಾಂತರಗೊಂಡ ಕೋವಿಡ್ ಪೀಡಿತರ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ.

ಕೆಲ ದಿನಗಳ ಹಿಂದೆ ಶಿವಮೊಗ್ಗದಲ್ಲಿ ಒಂದೇ ಕುಟುಂಬದ ನಾಲ್ವರಿಗೆ ರೂಪಾಂತರಗೊಂಡ ವೈರಾಣು ಇರು
ವುದು ಖಚಿತಪಟ್ಟಿತ್ತು. ಅವರೊಂದಿಗೆ ಈ ಮಹಿಳೆ ಸಂಪರ್ಕ ಹೊಂದಿದ್ದರು. ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದ ಇವರಿಗೆ ಸೋಂಕು ತಗುಲಿತ್ತು. ಹೀಗಾಗಿ ಇವರ ಮಾದರಿಯನ್ನೂ ಜಿನೋಮಿಕ್ ಸೀಕ್ವೆನ್ಸಿಸ್ ಪರೀಕ್ಷೆಗೆ ಕಳುಹಿಸಲಾಗಿತ್ತು ಎನ್ನುವುದು ಬಿಬಿಎಂಪಿ ಮೂಲಗಳಿಂದ ತಿಳಿದುಬಂದಿದೆ.

ಸೋಂಕಿತ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದ್ದು, ಬಿಬಿಎಂಪಿ ಸಿಬ್ಬಂದಿ ಅವರ ಸಂಪರ್ಕಿತರನ್ನು ಪತ್ತೆ ಮಾಡಲಾರಂಭಿಸಿದ್ದಾರೆ. ಸಂಪರ್ಕಿತರಿಗೆ ಹೊಸ ಮಾದರಿಯ ವೈರಾಣು ತಗುಲಿದ ಎರಡನೇ ಪ್ರಕರಣ ಇದಾಗಿದೆ. ಬೆಂಗಳೂರಿನಲ್ಲಿ ರೂಪಾಂತರಗೊಂಡ ಕೋವಿಡ್ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ನಾಲ್ಕು ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT