ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11,133 ಪೌರ ಕಾರ್ಮಿಕರ ಸೇವೆ ಕಾಯಂ: ಸಚಿವ ಸಂಪುಟ ಸಭೆ ಒಪ್ಪಿಗೆ

Last Updated 19 ಸೆಪ್ಟೆಂಬರ್ 2022, 18:37 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ದೀರ್ಘ ಕಾಲದಿಂದ ಕಾರ್ಯನಿರ್ವಹಿಸುತ್ತಿರುವ 11,133 ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಸೋಮವಾರ ಒಪ್ಪಿಗೆ ನೀಡಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 3,673, ಇತರ ಮಹಾನಗರ ಪಾಲಿಕೆಗಳ 1,927 ಮತ್ತು ಉಳಿದ ನಗರ ಸ್ಥಳೀಯ ಸಂಸ್ಥೆಗಳ 5,533 ಪೌರ ಕಾರ್ಮಿಕರ ಸೇವೆ ಕಾಯಂ ಆಗಲಿದೆ. ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಈ ಎಲ್ಲರ ಸೇವೆಯನ್ನು ಕಾಯಂಗೊಳಿಸುವ ತೀರ್ಮಾನ ಕೈಗೊಳ್ಳಲಿದೆ. ಇವರಿಗೆ ₹ 17,000– ₹28,980 ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

‘ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗಿದೆ. ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ಅವರ ಹೋರಾಟಕ್ಕೆ ಸ್ಪಂದಿಸಿರುವ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ’ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT