ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ವರ್ಷಗಳಲ್ಲಿ 125 ತಾಯಿ–ಮಕ್ಕಳ ಆಸ್ಪತ್ರೆ: ಬಿಎಸ್‌ವೈ

2,500 ವೈದ್ಯರ ನೇಮಕಾತಿ 15 ದಿನಗಳಲ್ಲಿ ಪೂರ್ಣ: ಸಚಿವ ಸುಧಾಕರ
Last Updated 6 ಜನವರಿ 2021, 20:39 IST
ಅಕ್ಷರ ಗಾತ್ರ

ಬೀದರ್‌: ತಾಯಿ ಮತ್ತು ಮಕ್ಕಳ ಆರೈಕೆಗಾಗಿ ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ 125 ಆಸ್ಪತ್ರೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ₹20 ಕೋಟಿ ವೆಚ್ಚದಲ್ಲಿ ನಿರ್ಮಿಸಿ ರುವನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸದ್ಯ ಖಾಸಗಿ ಆಸ್ಪತ್ರೆಗಳು ಬಡವರಿಗೆ ಹೆರಿಗೆಗೆ ತುಟ್ಟಿಯಾಗಿ ಪರಿಣಮಿಸಿವೆ. ತಜ್ಞ ವೈದ್ಯರನ್ನು ಒಳ ಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬಡವರಿಗೆ ಪೂರಕವಾಗಲಿವೆ’ ಎಂದುಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರಹೇಳಿದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 2,500 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಈ ನೇಮಕಾತಿ ಪ್ರಕ್ರಿಯೆ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಬಳಿಕ ವೈದ್ಯರ ಕೊರತೆ ನೀಗಲಿದೆ’ ಎಂದರು.

ಯಾದಗಿರಿ ವರದಿ: ಯಾದಗಿರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ, ‘ರಾಜ್ಯದ 18 ಜಿಲ್ಲೆ ಗಳಲ್ಲಿ ಈಗಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಿವೆ. 9 ಜಿಲ್ಲೆಗಳಲ್ಲಿ 2ವರ್ಷದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ಯಾದಗಿರಿ ವೈದ್ಯಕೀಯ ಕಾಲೇಜು 70 ಎಕರೆಯಲ್ಲಿ ₹ 325 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT