ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1,250 ಸಹಾಯಕ ಪ್ರಾಧ್ಯಾಪಕ ಹುದ್ದೆ ಶೀಘ್ರ ಭರ್ತಿ: ಡಾ.ಸಿ.ಎನ್‌. ಅಶ್ವತ್ಥನಾರಾಯಣ

Last Updated 16 ಫೆಬ್ರವರಿ 2023, 20:42 IST
ಅಕ್ಷರ ಗಾತ್ರ

ಬೆಂಗಳೂರು: ಶೀಘ್ರವೇ 1,250 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ ಎಂದು ಅವರು ಗುರುವಾರ ವಿಧಾನಸಭೆಯಲ್ಲಿ ಬಿಜೆಪಿಯ ಡಾ.ಅವಿನಾಶ್‌ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು.

6,500 ಮಂಜೂರಾದ ಹುದ್ದೆಗಳಲ್ಲಿ 5,000 ಭರ್ತಿ ಆಗಿವೆ. 1,250 ಹುದ್ದೆಗಳ ಭರ್ತಿ ನಂತರವೂ 250 ಹುದ್ದೆಗಳು ಖಾಲಿ ಉಳಿಯುತ್ತವೆ. ಮುಂಬರುವ ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುವುದು. ಅಲ್ಲದೇ, 310 ಪ್ರಾಂಶುಪಾಲರ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದರು.

ಸದ್ಯ, ಅತಿಥಿ ಉಪನ್ಯಾಸಕರಿಗೆ ಹಲವು ಜವಾಬ್ದಾರಿಗಳನ್ನು ನಿಗದಿ ಮಾಡಿದ್ದು ಅವುಗಳನ್ನೂ ನಿರ್ವಹಣೆ ಮಾಡಬೇಕು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT