ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 14 ದಿನ ಕೋವಿಡ್ ಕರ್ಫ್ಯೂ: ಏನಿರುತ್ತೆ... ಏನಿರಲ್ಲ?

Last Updated 26 ಏಪ್ರಿಲ್ 2021, 11:39 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಸೋಂಕಿನ ಹರಡುವಿಕೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ 14 ದಿನ ಕೋವಿಡ್ ಕರ್ಫ್ಯೂ ಜಾರಿ ಮಾಡಿದೆ. ಹಾಗಾದರೆ ಈ ಅವಧಿಯಲ್ಲಿ ಏನಿರಲಿದೆ. ಏನಿರುವುದಿಲ್ಲ? ಸಂಕ್ಷಿಪ್ತ ವಿವರ ಇಲ್ಲಿದೆ.

ಏನಿರುತ್ತೆ? ಏನಿರುವುದಿಲ್ಲ?

* ಬೆಳಿಗ್ಗೆ 6 ರಿಂದ 10ವರೆಗೆ ದಿನಸಿ, ಹಾಲು ಮತ್ತು ತರಕಾರಿ ಸೇರಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.

* ಉತ್ಪಾದನಾ ವಲಯಕ್ಕೆ ರಿಯಾಯ್ತಿ: ಗಾರ್ಮೆಂಟ್‌ ಉದ್ಯಮ ಹೊರತುಪಡಿಸಿ ಉಳಿದ ಎಲ್ಲ ಉತ್ಪಾದನಾ ಘಟಕಗಳ ಚಟುವಟಿಕೆಗಳನ್ನು ಮುಂದುವರಿಸಲು ಅವಕಾಶ ನೀಡಲಾಗಿದೆ. ಗಾರ್ಮೆಂಟ್ಸ್‌ಗಳಲ್ಲಿ ಒಂದೇ ಸೂರಿನಡಿ ಸಾವಿರಾರು ಜನ ಕುಳಿತು ಕೆಲಸ ಮಾಡುತ್ತಾರೆ. 7 ರಿಂದ 8 ಲಕ್ಷ ಜನ ಕೆಲಸ ಮಾಡುತ್ತಿದ್ದಾರೆ. ಇವರನ್ನು ಅಪಾಯಕ್ಕೊಡ್ಡುವುದು ಸರಿಯಲ್ಲ ಎಂಬ ಕಾರಣಕ್ಕೆ ಗಾರ್ಮೆಂಟ್ಸ್‌ ಘಟಕಗಳನ್ನು ಬಂದ್‌ ಮಾಡಿಸಲಾಗುವುದು ಎಂದುಸಿಎಂಹೇಳಿದ್ದಾರೆ.

* ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ.

* ನಿರ್ಮಾಣ ವಲಯ, ಕೃಷಿ ವಲಯ, ಮಾಧ್ಯಮ ಮತ್ತು ಅಗತ್ಯ ಸೇವೆಗಳ ಚಟುಟಿಕೆಗೆ ಅವಕಾಶ.

* ಅಂತರರಾಜ್ಯ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ.

* ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಇರುವುದಿಲ್ಲ.

* ತುರ್ತು ಸೇವೆಬಿಟ್ಟು ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.

* ಬೆಂಗಳೂರು ಮೆಟ್ರೋ ರೈಲು ಬಂದ್.

* 6 ತಿಂಗಳು ಯಾವುದೇ ಚುನಾವಣೆ ಇರುವುದಿಲ್ಲ. ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯೂ ಸೇರಿ ಎಲ್ಲ ಚುನಾವಣೆಗಳನ್ನು ಮುಂದೂಡಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

* ಹೊಟೇಲ್‌ನಿಂದ ಪಾರ್ಸೆಲ್‌ ಒಯ್ಯಲು ಅವಕಾಶ.

* ಬಾರ್‌ಗಳಿಂದ ಮದ್ಯವನ್ನು ಪಾರ್ಸೆಲ್‌ ಒಯ್ಯಬಹುದು.

* ಪೊಲೀಸ್‌, ಆರೋಗ್ಯ ಮತ್ತು ಕಂದಾಯ ಇಲಾಖೆಗಳನ್ನು ಬಿಟ್ಟು ಉಳಿದ ಇಲಾಖೆಗಳು ಕಾರ್ಯನಿರ್ವಹಿಸುವುದಿಲ್ಲ.

* ಮದುವೆಗಳನ್ನು ನಡೆಸಬಹುದು. ಈ ಸಂಬಂಧ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿ ಅನ್ವಯವಾಗಲಿದೆ.

ರಾತ್ರಿ ವೇಳೆಯಲ್ಲಿ ಎಂದಿನಂತೆ ರಾತ್ರಿ ಕರ್ಫ್ಯೂ ಮುಂದುವರಿಯುತ್ತದೆ. 2 ವಾರ ಪರಿಸ್ಥಿತಿ ನೋಡಿಕೊಂಡು ನಿರ್ಬಂಧಗಳನ್ನು ಮುಂದುವರಿಸಬೇಕೆ– ಬೇಡವೇ ಎಂಬುದನ್ನು ತೀರ್ಮಾನಿಸಲಾಗುವುದು. ಅನಿವಾರ್ಯ. ಆದರೆ ಮುಂದುವರಿಸಲಾಗುವುದು ಎಂದು ಸಿಎಂಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT