ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಂಟ್ರೊ ರವಿ, ಸಹಚರರಿಗೆ 14 ದಿನ ನ್ಯಾಯಾಂಗ ಬಂಧನ

Last Updated 14 ಜನವರಿ 2023, 19:31 IST
ಅಕ್ಷರ ಗಾತ್ರ

ಮೈಸೂರು: ಪರಿಶಿಷ್ಟ ಮಹಿಳೆ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಗೂಂಡಾಗಿರಿ ಆರೋಪದ ಮೇರೆಗೆ ಪೊಲೀಸರು ಗುಜರಾತ್‌ನಲ್ಲಿ ಬಂಧಿಸಿದ್ದ ಕೆ.ಎಸ್‌. ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೊ ರವಿ ಮತ್ತು ಸಹವರ್ತಿಗಳಾದ ಪ್ರೇಮ್‌ಜಿ ಹಾಗೂ ಶ್ರುತೇಶ್‌ (ಸತೀಶ್‌) ಅವರಿಗೆ ಇಲ್ಲಿನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದರು.

ಶನಿವಾರ ನಸುಕಿನ ಜಾವ ಅಹಮದಾಬಾದ್‌ನಿಂದ ಆರೋಪಿಗಳನ್ನು ನಗರಕ್ಕೆ ಕರೆತಂದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ವಿಜಯನಗರ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಕುಮಾರ್‌ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು.

ಠಾಣೆ ಬಳಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಿ, ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ‘ನಗರದ 6ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಬೇಕಿತ್ತು. ಎರಡನೇ ಶನಿವಾರ ನ್ಯಾಯಾಲಯ ಕಲಾಪವಿಲ್ಲದೆ ಸಂಜೆ 6 ಗಂಟೆಗೆ ನಗರದ ವಾಲ್ಮೀಕಿ ರಸ್ತೆಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ಯಲಾಯಿತು. ಬಳಿಕ ಕಾರಾಗೃಹಕ್ಕೆ ರವಾನಿಸಲಾಯಿತು’ ಎಂದು ತನಿಖಾಧಿಕಾರಿ ಬಿ.ಎಸ್‌. ರವಿಶಂಕರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

*
ಸ್ಯಾಂಟ್ರೊ ರವಿ ನಿರಂತರ ಇನ್ಸುಲಿನ್‌ ತೆಗೆದುಕೊಳ್ಳುವುದು ವೈದ್ಯಕೀಯ ತಪಾಸಣೆ ವೇಳೆ ಗೊತ್ತಾಗಿದ್ದು, ಅದನ್ನು ಒದಗಿಸಲಾಗುವುದು. -ಅಲೋಕ್ ಕುಮಾರ್‌, ಎಡಿಜಿಪಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT