ಮಂಗಳವಾರ, ಅಕ್ಟೋಬರ್ 27, 2020
22 °C

ಮೃತದೇಹದ ಜೊತೆ1.5 ಕೆ.ಜಿ. ಚಿನ್ನ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ: ತಾಲ್ಲೂಕಿನ ಅವರಕೋಡ ಗ್ರಾಮದ ಕೃಷ್ಣಾ ನದಿಯಲ್ಲಿ ತೇಲಿ ಬಂದ ವ್ಯಕ್ತಿಯ ಮೃತ ದೇಹದೊಂದಿಗಿದ್ದ ಬ್ಯಾಗ್‌ನಲ್ಲಿ 1.5 ಕೆ.ಜಿ. ಬಂಗಾರ ಪತ್ತೆಯಾಗಿದೆ.

ಮೃತ ದೇಹವು ಬುಧವಾರ ರಾತ್ರಿ ದಡದಲ್ಲಿ ಸಿಲುಕಿರುವುದನ್ನು ಗಮನಿಸಿದ ಕೆಲವರು ಅಥಣಿ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು. ಮೃತರನ್ನು ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಮೀರಜ್‌ ತಾಲ್ಲೂಕಿನ ಪಾಟಗಾಂವ ಗ್ರಾಮದ ಸಾಗರ ಪಾಟೀಲ (30) ಎಂದು ಗುರುತಿಸಲಾಗಿದೆ. ‘ಮೃತರ ಕೊರಳಲ್ಲಿದ್ದ ಬ್ಯಾಗ್‌ನಲ್ಲಿ ಒಂದೂವರೆ ಕೆ.ಜಿ. ಚಿನ್ನದ ಗಟ್ಟಿ ಸಿಕ್ಕಿದೆ. ದೇಹದ ಮೇಲೆ ಗಾಯದ ಗುರುತುಗಳಿದ್ದವು. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಡಿವೈಎಸ್ಪಿ ಎಸ್‌.ವಿ. ಗಿರೀಶ್ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು