ಸೋಮವಾರ, ಅಕ್ಟೋಬರ್ 18, 2021
27 °C
ಜ್ಞಾನಪೀಠ ಪುರಸ್ಕೃತ 11 ಜನರು ಅಧ್ಯಯನ ಮಾಡಿದ ಶಾಲೆ

ಸಾಹಿತಿಗಳು ಓದಿದ ಶಾಲೆಗಳಿಗೆ ₹16.88 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಎಂಟು ಜ್ಞಾನಪೀಠ ಪುರಸ್ಕೃತರು ಶಿಕ್ಷಣ ಪಡೆದ 11 ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ₹16.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

ಈ ಶಾಲೆಗಳ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಇದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.

ಎಂಟು ಜ್ಞಾನಪೀಠ ಪುರಸ್ಕೃತರು ಓದಿದ ಶಾಲೆಗಳ ಅಭಿವೃದ್ಧಿಗೆ ₹16 ಕೋಟಿ ಬಿಡುಗಡೆ ಮಾಡಿರುವ ಸರ್ಕಾರದ ಕ್ರಮ ಶ್ಲಾಘನೀಯ ಎಂದು ಸರ್ಕಾರ ಮಾಜಿ ಶಿಕ್ಷಣ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಹೇಳಿದ್ದಾರೆ.

ಸರ್ಕಾರಿ ಶಾಲೆಗಳ ಪುನರುತ್ಥಾನಕ್ಕೆ ಸರ್ಕಾರಕ್ಕೆ ಸಲ್ಲಿಸಿದ ನನ್ನ ಮೊದಲನೇ ಶಿಫಾರಸ್ಸಿಗೆ ಮನ್ನಣೆ ಸಿಕ್ಕಿದೆ. ಶಾಲಾ ದತ್ತು ನೀತಿಗೆ ಬಿ.ಎಸ್‌.ಯಡಿಯೂರಪ್ಪ ಅವರು ಹೊಸ ಆಯಾಮ ನೀಡಿದರು. ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ದತ್ತು ಶಾಲೆಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಮತ್ತು ಅವುಗಳ ಶೈಕ್ಷಣಿಕ ಅಭಿವೃದ್ಧಿಯನ್ನು ವಿಶ್ವವಿದ್ಯಾಲಯಗಳ ವಹಿಸುತ್ತಿರುವುದು ಕರ್ನಾಟಕದಲ್ಲೇ ಮೊದಲು ಎಂದು ಹೇಳಿದ್ದಾರೆ.

*ಕ್ರಿಯಾ ಯೋಜನೆಯನ್ನು 6 ತಿಂಗಳ ಕಾಲಮಿತಿಯಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು

*ಈ ಶಾಲೆಗಳಲ್ಲಿ ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ, ಸ್ಮಾರ್ಟ್‌, ತರಗತಿ, ಪೀಠೋಪಕರಣಗಳು, ಕುಡಿಯುವ ನೀರು, ಕ್ರೀಡಾ ಸಾಮಗ್ರಿಗಳು, ಶಾಲಾ ಗೋಡೆಗಳಿಗೆ ಬಣ್ಣ ಬಳಿಯಲಾಗುವುದು

*ಜ್ಞಾನಪೀಠ ಪುರಸ್ಕೃತರ ಗೌರವವನ್ನು ಹೆಚ್ಚಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.