ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಪರೀಕ್ಷೆಗೆ 18,414 ವಿದ್ಯಾರ್ಥಿಗಳು

Last Updated 13 ಆಗಸ್ಟ್ 2021, 18:33 IST
ಅಕ್ಷರ ಗಾತ್ರ

ಬೆಂಗಳೂರು: ಆಗಸ್ಟ್‌ 19ರಿಂದ ಸೆಪ್ಟೆಂಬರ್‌ 3ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 18,414 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಪೂರಕ ಪರೀಕ್ಷೆಯ ಸಿದ್ಧತೆ ಕುರಿತು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಮಾತನಾಡಿದ ಅವರು, ‘ಸರಾಸರಿ ಆಧಾರದ ಮೇಲೆ ಪ್ರಕಟಿಸಿರುವ ಫಲಿತಾಂಶವನ್ನು ತಿರಸ್ಕರಿಸಿರುವ 900 ವಿದ್ಯಾರ್ಥಿಗಳು ಮತ್ತು 17,514 ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ವಿವರಿಸಿದರು.

5,546 ಕಾಲೇಜುಗಳ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಎದುರಿಸಲಿದ್ದಾರೆ. 187 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಇದೇ 17ಕ್ಕೂ ಮೊದಲು ಎಲ್ಲ ಸಿದ್ಧತೆಗಳನ್ನೂ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ದೋಷರಹಿತವಾಗಿ ಮತ್ತು ಅತ್ಯಂತ ವ್ಯವಸ್ಥಿತವಾಗಿ ಪೂರಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಒಂದರಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಎರಡು ಹಂತಗಳಲ್ಲಿ ಆರಂಭಿಸುವ ಚಿಂತನೆ ನಡೆದಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಆರ್‌. ಸ್ನೇಹಲ್‌ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT