ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಅತ್ಯಾಚಾರ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ.

ಶಿವಮೊಗ್ಗ ಟಿಪ್ಪುನಗರದ ಮೊಹಮದ್‌ ಗೌಸ್‌ ಪೀರ್ ಶಿಕ್ಷೆಗೆ ಒಳಗಾದ ಅಪರಾಧಿ. ಆತ ಎರಡು ವರ್ಷಗಳ ಹಿಂದೆ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಬಿ.ಕೆ.ಲತಾ ಪ್ರಕರಣದ ತನಿಖೆ ನಡೆಸಿದ್ದರು.

ನ್ಯಾಯಾಲಯದ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ನ್ಯಾಯಾಧೀಶ ದಯಾನಂದ ಮಂಗಳವಾರ ಶಿಕ್ಷೆಯ ಆದೇಶ ಪ್ರಕಟಿಸಿದರು.

ದಂಡದ ಹಣದಲ್ಲಿ ₹ 48 ಸಾವಿರ ಬಾಲಕಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಸತೀಶ್‍ ವಾದ ಮಂಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.