ಮಂಗಳವಾರ, ಆಗಸ್ಟ್ 9, 2022
20 °C
ನನ್ನ ಮೇಲಿನ ಗಣಿಲಂಚ ಆರೋಪದ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತ ನೀಡಿದ್ದೆ ಎಂದ ಮಾಜಿ ಸಿಎಂ

ನೀರಾವರಿ ಟೆಂಡರ್‌ ₹2000 ಕೋಟಿ ಕಿಕ್‌ ಬ್ಯಾಕ್‌ ಆರೋಪ ತನಿಖೆಯಾಗಲಿ: ಎಚ್‌ಡಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದಾಗ ನನ್ನ ಮೇಲೆ ಬಿಜೆಪಿ ನಾಯಕರು ಮಾಡಿರುವ ಗಣಿ ಲಂಚ ಆರೋಪ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತಕ್ಕೆ ನೀಡಿ ಪಾರದರ್ಶಕತೆ ಮೆರೆದಿದ್ದೆ. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ ಸ್ವಪಕ್ಷೀಯರಿದಂಲೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಲಾಗಿದೆ. ಈ ಕುರಿತು ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, '2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ₹150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ?' ಎಂದು ಕೇಳಿದ್ದಾರೆ. 

ಇದನ್ನೂ ಓದಿ: 

'ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಸಿಎಂ ಯಡಿಯೂರಪ್ಪ 2006ರಲ್ಲಿ ನಾನು ಇಟ್ಟಂಥ ಹೆಜ್ಜೆಯನ್ನೇ ಇಟ್ಟು ತಾವು ಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡಬೇಕು. ಹೀಗಾಗಿ ಕೂಡಲೇ ಆರೋಪವನ್ನು ತನಿಖೆಗೆ ಒಪ್ಪಿಸಬೇಕು' ಎಂದು ಬೇಡಿಕೆಯಿರಿಸಿದ್ದಾರೆ. 

'ಈ ಭ್ರಷ್ಟಾಚಾರದ ಆರೋಪದಲ್ಲಿ ಅನ್ಯರ ಹಸ್ತಕ್ಷೇಪದ ಆರೋಪವಿದೆ.  ಆಡಳಿತದಲ್ಲಿ, ಅದೂ ಸರ್ಕಾರದ ಹಂತದಲ್ಲಿ ಮುಖ್ಯಮಂತ್ರಿಗಳ ಕುಟುಂಬಸ್ಥರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜನರ ಸೇವೆಯಲ್ಲಿ ತೊಡಗಿರುವ ಸರ್ಕಾರದಲ್ಲಿ ಸಂಬಂಧವೇ ಇಲ್ಲದವರ ಹಸ್ತಕ್ಷೇಪ ಸರಿಯಲ್ಲ. ಹೀಗಾಗಿ ಅನ್ಯರ ಹಸ್ತಕ್ಷೇಪದ ವಿಚಾರದಲ್ಲಿಯೂ ಗಂಭೀರ ತನಿಖೆ ನಡೆಯಬೇಕು' ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು