ಸಿಂಧನೂರು (ರಾಯಚೂರು ಜಿಲ್ಲೆ): ‘ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 25 ಸಾವಿರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಶೀಘ್ರ ಕ್ರಮಕೈಗೊಳ್ಳಲಿದೆ’ ಎಂದು 371 (ಜೆ) ಅನುಷ್ಠಾನಕ್ಕೆ ಸಂಬಂಧಿಸಿದ ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆಗಿರುವಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಭಾಗದ ಸಮಗ್ರ ಅಭಿವೃದ್ದಿಗೆ ಸರ್ಕಾರ ಬದ್ಧವಾಗಿದೆ. 371(ಜೆ) ಅನುಷ್ಠಾನದಲ್ಲಿ ಲೋಪ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.

‘ಆರ್ಎಸ್ಎಸ್ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಗೊತ್ತಿದೆ. ಹೀಗಾಗಿ ಅವರು ಹೊಗಳುತ್ತಾರೆ. ಆದರೆ ಅವರ ಪುತ್ರ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸರಿಯಾಗಿ ಗೊತ್ತಿಲ್ಲ. ಹೀಗಾಗಿ ಕೇವಲ ಪ್ರಚಾರಕ್ಕಾಗಿ ಅವರು ಹೇಳಿಕೆ ನೀಡುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.