ಮಂಗಳವಾರ, ಡಿಸೆಂಬರ್ 1, 2020
17 °C

27 ಕೊರೊನಾ ಸೋಂಕಿತರಿಂದ ಮತದಾನ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಹೊಂದಿರುವ 27 ಮತದಾರರು ಆರ್‌.ಆರ್‌.ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾನ ಮಾಡುವುದಾಗಿ ಬಿಬಿಎಂಪಿಗೆ ತಿಳಿಸಿದ್ದಾರೆ.

ಕೋವಿಡ್‌ ರೋಗಿಗಳು ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕಿನಿಂದ ವಂಚಿತ ಆಗಬಾರದು ಎಂಬ ಕಾರಣಕ್ಕೆ ಅವರು ಮತದಾನ ಮಾಡುವುದಕ್ಕೆ ಬಿಬಿಎಂಪಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿದೆ. ಈ ಕ್ಷೇತ್ರದಲ್ಲಿ ನೆಲೆಸಿರುವ 1,117 ಮಂದಿ ಕೊರೊನಾ ಸೋಂಕಿತರಿಗೆ ಪಾಲಿಕೆ ಸಿಬ್ಬಂದಿ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದರು. ಅವರಲ್ಲಿ 148 ಮಂದಿ ಇದೇ ಕ್ಷೇತ್ರದ ಮತದಾರರಿದ್ದರು.

‘ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 12 ಮಂದಿ ಹಾಗೂ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವ 15 ಮಂದಿ ಕೊರೊನಾ ಸೋಂಕಿತರು ಮತದಾನ ಮಾಡುವುದಾಗಿ ಹೇಳಿದ್ದಾರೆ. ಅವರನ್ನು ಮತಗಟ್ಟೆಗೆ ಕರೆತರಲು ಆಂಬುಲೆನ್ಸ್ ವ್ಯವಸ್ಥೆ ಮಾಡಲಿದ್ದೇವೆ. ವೈಯಕ್ತಿಕ ಸುರಕ್ಷತಾ ಸಾಧನಗಳನ್ನು ನಾವೇ ಒದಗಿಸಲಿದ್ದೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೊರೊನಾ ಸೋಂಕು ಇರುವ ಮತದಾರರು ಮತದಾನ ಮಾಡಲು ಬಯಸಿದರೆ ಮಂಗಳವಾರವೂ ಬಿಬಿಎಂಪಿ ನಿಯಂತ್ರಣ ಕೊಠಡಿಯನ್ನು (080 28600954, 28604331) ಅಥವಾ ಮೊಬೈಲ್‌ ಸಂಖ್ಯೆ 9482224474 ಅನ್ನು ಸಂಪರ್ಕಿಸಬಹುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು