ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ. 2ರಿಂದ 7ರವರೆಗೆ ಸಾಣೇಹಳ್ಳಿ ನಾಟಕೋತ್ಸವ ಬೆಳ್ಳಿಹಬ್ಬ

Last Updated 20 ಅಕ್ಟೋಬರ್ 2021, 18:23 IST
ಅಕ್ಷರ ಗಾತ್ರ

ಸಾಣೇಹಳ್ಳಿ(ಹೊಸದುರ್ಗ): ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಿಂದ ಈ ಬಾರಿ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬ ಕಾರ್ಯಕ್ರಮ ನ. 2ರಿಂದ 7ರವರೆಗೆ ನಡೆಯಲಿದೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ವಾಮೀಜಿ, ‘ನ. 2ರಂದು ಸಂಜೆ 6 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಿಜಿಕೆ ನುಡಿ–ಚಿತ್ರ ಟಂಕಸಾಲೆ (ಡಿಜಿಟಲ್‌ ಎವಿ ರೆಕಾರ್ಡಿಂಗ್‌ ಸ್ಟುಡಿಯೊ) ಉದ್ಘಾಟಿಸುವರು. ಬೆಂಗಳೂರಿನ ರಾಷ್ಟ್ರೀಯ ರಂಗಶಾಲೆ ನಿರ್ದೇಶಕಿ ವೀಣಾ ಶರ್ಮಾ ಭೂಸನೂರಮಠ ಅವರು ಶಿವಸಂಚಾರ ನಾಟಕಗಳನ್ನು ಉದ್ಘಾಟಿಸುವರು. ಕವಿ ಡಾ.ದೊಡ್ದರಂಗೇಗೌಡ ಕನ್ನಡ ರಾಜ್ಯೋತ್ಸವ ಉದ್ಘಾಟಿಸುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ ಕುಮಾರ್‌ ನಾಟಕೋತ್ಸವ ಉದ್ಘಾಟಿಸುವರು. ನ. 7ರಂದು ನಡೆಯುವ ಶಿವಕುಮಾರ ಪ್ರಶಸ್ತಿ ಪ್ರದಾನ ಹಾಗೂ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಶಿವಸಂಚಾರ ನಾಟಕೋತ್ಸವ ಆರಂಭವಾಗಿ 25 ವರ್ಷ ತುಂಬುತ್ತಿದೆ. 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಇದ್ದ ಸಾಹಿತ್ಯ ವರ್ಗ ವಿವಿಧ ವರ್ಗದ ಕಾಯಕ ಜೀವಿಗಳಾಗಿದ್ದರು. ಅವರಲ್ಲಿ ಒಕ್ಕಲಿಗ ಮುದ್ದಣ್ಣ ಬದುಕಿನ ಪೂರ್ಣ ಕೃಷಿ ಕಾಯಕ ಇಟ್ಟುಕೊಂಡಿದ್ದರು. ನಮ್ಮದು ಕೃಷಿ ಪ್ರಧಾನ ರಾಷ್ಟ್ರ. ಕೃಷಿಕರು ಇಂದು ತಮ್ಮ ಉಳಿವಿಗಾಗಿ ಹೋರಾಟ ನಡೆಸುತ್ತಿರುವುದು ಕಾಣುತ್ತಿದ್ದೇವೆ. ಅವರ ಹಿತ ಕಾಪಾಡುವ ಪ್ರಾಮಾಣಿಕ ಪ್ರಯತ್ನ ಆಗುತ್ತಿಲ್ಲ. ಕೃಷಿಕ ಒಕ್ಕಲುತನ ಬಿಟ್ಟರೆ ಜಗತ್ತಿಗೆ ಆಹಾರ ಧಾನ್ಯವೇ ಇಲ್ಲದಂತಾಗುತ್ತದೆ. ಹೀಗಾಗಿ ಅನ್ನದಾತರನ್ನು ಎಲ್ಲರೂ ಗೌರವಿಸಬೇಕು ಎಂಬ ಉದ್ದೇಶದಿಂದ ಈ ಬಾರಿ ‘ಒಕ್ಕಲಿಗ ಒಕ್ಕದಿರೆ ಜಗವೆಲ್ಲ ಬಿಕ್ಕುವುದು’ ಎಂಬ ಧ್ಯೇಯ ವಾಕ್ಯದಡಿ ನಾಟಕೋತ್ಸವ ನಡೆಸಲಾಗುತ್ತಿದೆ’ ಎಂದು ಸ್ವಾಮೀಜಿ
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT