ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡುಗೆ ಸಹಾಯಕರ 3 ತಿಂಗಳ ಸಂಭಾವನೆ ಬಿಡುಗಡೆ: ಸುರೇಶ್ ಕುಮಾರ್

Last Updated 2 ಜನವರಿ 2021, 10:26 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಶಾಲೆಗಳ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರ 2020ರ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗಿನ ಮೂರು ತಿಂಗಳ ಗೌರವ ಸಂಭಾವನೆ ಪಾವತಿಗೆ ₹ 93.45 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಜ. 1ರಂದೇ ಆದೇಶ ಹೊರಡಿಸಲಾಗಿದೆ. ಈ ಮೂರು ತಿಂಗಳ ವೇತನವನ್ನು ಕೂಡಲೇ ಅಡುಗೆ ಸಹಾಯಕರಿಗೆ ನೀಡಲಾಗುವುದು. 2021ರ ಜನವರಿಯಿಂದ ಮಾರ್ಚ್ ವರೆಗಿನ ತ್ರೈಮಾಸಿಕದ ಗೌರವ ಸಂಭಾವನೆಯನ್ನು ಶೀಘ್ರವೇ ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT