ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

31ರ ಪ್ರತಿಭಟನೆ ವಾಪಸ್‌: ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ

Last Updated 29 ಜನವರಿ 2021, 13:46 IST
ಅಕ್ಷರ ಗಾತ್ರ

ಬೆಂಗಳೂರು: ‘ಖಾಸಗಿ ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಬೋಧನಾ ಶುಲ್ಕವನ್ನು ಶೇ 70ರಷ್ಟು ಮಾತ್ರ ವಸೂಲು ಮಾಡಬೇಕು ಎಂದು ರಾಜ್ಯ ಸರ್ಕಾರ ನಿರ್ಧರಿಸಿರುವುದರಿಂದ, ಇದೇ 31ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ವಾಪಸು ಪಡೆದುಕೊಳ್ಳಲಾಗಿದೆ’ ಎಂದು ಕರ್ನಾಟಕ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಹೇಳಿದೆ.

’ಸರ್ಕಾರದ ತೀರ್ಮಾನವನ್ನು ಸಮಿತಿ ಸ್ವಾಗತಿಸುತ್ತದೆ. ಈ ನಿರ್ಧಾರದಂತೆ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು’ ಎಂದೂ ಸಮಿತಿ ಆಗ್ರಹಿಸಿದೆ.

‘ಬೋಧನಾ ಶುಲ್ಕ ಬಿಟ್ಟು ಬೇರೆ ಯಾವುದೇ ಶುಲ್ಕ ಸಂಗ್ರಹಿಸಬಾರದು ಎಂಬ ನಮ್ಮ ಬೇಡಿಕೆಯನ್ನು ಸರ್ಕಾರ ಒಪ್ಪಿದೆ. ಬೋಧನಾ ಶುಲ್ಕದಲ್ಲಿ ಕ್ರೀಡಾ ಚಟುವಟಿಕೆ, ಪ್ರಯೋಗಾಲಯ, ಗ್ರಂಥಾಲಯ ಶುಲ್ಕ ಸೇರಿದೆ. ಈ ಮೂರನ್ನೂ ವಿದ್ಯಾರ್ಥಿಗಳು ಈ ಬಾರಿ ಬಳಸಿಲ್ಲ. ಹೀಗಾಗಿ, ಸರ್ಕಾರ ಆದೇಶ ಮಾಡುವ ವೇಳೆ ಈ ಶುಲ್ಕವನ್ನು ವಸೂಲು ಮಾಡದಂತೆ ಸ್ಪಷ್ಟವಾಗಿ ತಿಳಿಸಬೇಕು’ ಎಂದೂ ಸಮಿತಿ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT