ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಲಿಂಗಾಯತರಿಗೆ 32 ಟಿಕೆಟ್‌

Last Updated 25 ಮಾರ್ಚ್ 2023, 18:14 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ 124 ಕ್ಷೇತ್ರಗಳಿಗೆ ಘೋಷಿಸಿದ ಮೊದಲ ಪಟ್ಟಿಯಲ್ಲಿ ಜಾತಿವಾರು ಲೆಕ್ಕಾಚಾರವೂ ಗಮನ ಸೆಳೆದಿದೆ. ನಿರೀಕ್ಷೆಯಂತೆ ಲಿಂಗಾಯತ ಸಮುದಾಯದವರಿಗೆ ಹೆಚ್ಚು ಟಿಕೆಟ್‌ ನೀಡಲಾಗಿದೆ. ಉಳಿದಂತೆ ಒಕ್ಕಲಿಗ, ಪರಿಶಿಷ್ಟ ಜಾತಿ, ಕುರುಬ ಮತ್ತು ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.

ಈ ಬಾರಿ ಲಿಂಗಾಯತ ಸಮುದಾಯ ಅಭ್ಯರ್ಥಿಗಳಿಗೆ ಹೆಚ್ಚು ಟಿಕೆಟ್‌ ನೀಡಬೇಕು ಎಂದು ಅಖಿಲ ಭಾರತ ಲಿಂಗಾಯತ ಮಹಾಸಭಾ ಈಗಾಗಲೇ ಕಾಂಗ್ರೆಸ್‌ ವರಿಷ್ಠರಲ್ಲಿ ಬೇಡಿಕೆ ಇಟ್ಟಿದೆ. ಅದಕ್ಕೆ ಪೂರಕವಾಗಿ, ಮೊದಲ ಪಟ್ಟಿಯಲ್ಲಿ ಈ ಸಮುದಾಯದ 32 ಅಭ್ಯರ್ಥಿಗಳು ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ, 36 ಅನ್ನು ಪರಿಶಿಷ್ಟ ಜಾತಿಗೆ, 15 ಕ್ಷೇತ್ರಗಳನ್ನು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಲಾಗಿದೆ. ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯಲ್ಲಿ 22 ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು 10 ಕ್ಷೇತ್ರಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT