ಕೋಲಾರ: ಜಿಲ್ಲೆಯಲ್ಲಿ ಈಚೆಗೆ ಸುರಿದ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಯಿಂದಾಗಿ 3,400 ಹೆಕ್ಟೇರ್ ಮಾವಿನ ಫಸಲು ಹಾಗೂ 200 ಹೆಕ್ಟೇರ್ ಟೊಮೆಟೊ ಫಸಲು ನಷ್ಟವಾಗಿದೆ.
ಜಿಲ್ಲೆಯಲ್ಲಿ ಸುಮಾರು 52 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆಯುತ್ತಾರೆ. ಅದರಲ್ಲಿ ಶ್ರೀನಿವಾಸಪುರ ತಾಲ್ಲೂಕಿನಲ್ಲೇ ಶೇ 70ರಷ್ಟು ಮಾವು ಬೆಳೆಯುತ್ತಾರೆ. ಆಲಿಕಲ್ಲು ಮಳೆಯಿಂದಾಗಿ ಮಾವಿನ ಪಿಂದೆಗಳು ಉದುರಿವೆ. ಹೀಗಾಗಿ, ಈ ಬಾರಿ ಇಳುವರಿ ಕಡಿಮೆಯಾಗುವ ಆತಂಕ ಎದುರಾಗಿದೆ.
ಇದಲ್ಲದೇ, ಸೀಬೆ, ಟೊಮೆಟೊ, ಕ್ಯಾಪ್ಸಿಕಂ, ಆಲೂಗಡ್ಡೆ, ಕೋಸು, ಬೀನ್ಸ್, ಹುಣಸೆ, ಜೋಳ, ಹೂವಿನ ಬೆಳೆಗೆ ಭಾರಿ ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 4,250 ಹೆಕ್ಟೇರ್ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ.
ಜಿಲ್ಲಾಡಳಿತದ ನೇತೃತ್ವದಲ್ಲಿ ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದು, ನಂತರವಷ್ಟೇ ಬೆಳೆ ನಷ್ಟದ ನಿಖರ ಮಾಹಿತಿ ಗೊತ್ತಾಗಲಿದೆ.
‘ರೈತರಿಂದ ಮಾಹಿತಿ ಪಡೆದು ಅಂದಾಜು ಸಮೀಕ್ಷೆ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಜಂಟಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು’ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಕುಮಾರಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.