ಭಾನುವಾರ, ಏಪ್ರಿಲ್ 18, 2021
24 °C

ಟ್ರಾಲಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 350 ಗ್ರಾಂ ಚಿನ್ನ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯನ್ನು ಬಂಧಿಸಿರುವ ಕಸ್ಟಮ್ಸ್‌ ಅಧಿಕಾರಿಗಳು 350 ಗ್ರಾಂ. ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಮುರುಡೇಶ್ವರದ ಮೊಹಮ್ಮದ್ ಅವಾನ್‌ ಬಂಧಿತ ವ್ಯಕ್ತಿ. ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಬಂದಿದ್ದ ಮೊಹಮ್ಮದ್ ಅವಾನ್‌, ತನ್ನ ಟ್ರಾಲಿ ಬ್ಯಾಗ್‌ನಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದ. ಗುಪ್ತಚರ ಮಾಹಿತಿ ಆಧರಿಸಿ, ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಉಪ ಆಯುಕ್ತ ಡಾ.ಕಪಿಲ್‌ ಗಡೆ ತಿಳಿಸಿದ್ದಾರೆ.

ವಶಕ್ಕೆ ಪಡೆದ ಚಿನ್ನದ ಮೌಲ್ಯ ₹ 16.52ಲಕ್ಷವಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು