ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC | 362 ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿ ಸಕ್ರಮಕ್ಕೆ ರಾಜ್ಯಪಾಲರ ಅಂಕಿತ

362 ಅಭ್ಯರ್ಥಿಗಳ ನೇಮಕಾತಿ: ಮಸೂದೆಗೆ ರಾಜ್ಯಪಾಲರ ಅಂಕಿತ
Last Updated 14 ಮಾರ್ಚ್ 2022, 13:15 IST
ಅಕ್ಷರ ಗಾತ್ರ

ಬೆಂಗಳೂರು: 'ಕರ್ನಾಟಕ ಸಿವಿಲ್‌ ಸೇವೆಗಳ (2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್‌ಗಳ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಮಸೂದೆ–2022'ಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ನಡೆಸಿದ್ದ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳ ನೇಮಕಾತಿಗೆ ಸಿಂಧುತ್ವದ ಮುದ್ರೆ ಒತ್ತಲು ರಾಜ್ಯ ಸರ್ಕಾರ ಇದನ್ನು ಸಿದ್ಧಪಡಿಸಿತ್ತು.

ಅಕ್ರಮ, ಭ್ರಷ್ಟಾಚಾರದ ಆರೋಪಗಳ ಸುಳಿಗೆ ಸಿಲುಕಿ ತನಿಖೆ, ವಿಚಾರಣೆಗೆ ಒಳಗಾಗಿ, ಹೈಕೋರ್ಟ್‌, ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿ ಎಂಟು ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿರುವ ಈ ಆಯ್ಕೆ ಪಟ್ಟಿಯನ್ನು ಕಾಯ್ದೆಯ ಮೂಲಕ ಸಕ್ರಮಗೊಳಿಸಲು ಕಳೆದ ಅಧಿವೇಶನದಲ್ಲಿ ಸರ್ಕಾರ ಮಸೂದೆ ಮಂಡಿಸಿತ್ತು. ಚರ್ಚೆ ಇಲ್ಲದೆ ಈ ಮಸೂದೆ ಅಂಗೀಕಾರಗೊಂಡಿತ್ತು.

ಇದೀಗ, ಮಸೂದೆಗೆ ರಾಜ್ಯಪಾಲರು ಅಂಕಿತ ಬಿದ್ದಿರುವುದರಿಂದ, ಸರ್ಕಾರ ಅದರ ರಾಜ್ಯಪತ್ರ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT