ಗುರುವಾರ , ಜುಲೈ 7, 2022
22 °C

ಮೇಕೆದಾಟು ಪಾದಯಾತ್ರೆ: ಡಿ.ಕೆ. ಶಿವಕುಮಾರ್ ಸೇರಿ 38 ಮಂದಿ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ 38 ಮಂದಿ ವಿರುದ್ಧ ರಾಮನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಪ್ರಕರಣದಲ್ಲಿ‌ ಮೊದಲ ಆರೋಪಿಯಾಗಿಸಲಾಗಿದೆ. ನಂತರದಲ್ಲಿ‌ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹಮ್ಮದ್, ಮೊಹಮ್ಮದ್ ನಲಪ್ಪಾಡ್ ಹ್ಯಾರಿಸ್, ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಎಂ.ಬಿ.‌ ಪಾಟೀಲ, ಯು.ಟಿ. ಖಾದರ್, ಕೆ.ಎಚ್. ಮುನಿಯಪ್ಪ , ಚಿತ್ರ ನಟರಾದ ಸಾಧುಕೋಕಿಲ, ನೆನಪಿರಲಿ ಪ್ರೇಮ್ ಮತ್ತಿತರರ ವಿರುದ್ಧ ರಾಮನಗರದ ಐಜೂರು ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು