ಸೋಮವಾರ, ಅಕ್ಟೋಬರ್ 26, 2020
28 °C

ಆರು ತಿಂಗಳಲ್ಲಿ 3,591 ಕಿ.ಮೀ. ಹೆದ್ದಾರಿ ನಿರ್ಮಾಣ: ಹೆದ್ದಾರಿ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ಬಿಕ್ಕಟ್ಟಿನ ನಡುವೆಯೂ, ಪ್ರಸಕ್ತ ಹಣಕಾಸು ವರ್ಷದ ಮೊದಲ ಆರು ತಿಂಗಳ ಅವಧಿಯಲ್ಲಿ 3,591 ಕಿ.ಮೀ. ವ್ಯಾಪ್ತಿಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ತಿಳಿಸಿದೆ. 

ಪ್ರತಿದಿನ 21.60 ಕಿಲೋಮೀಟರ್‌ ರಸ್ತೆ ನಿರ್ಮಾಣ ಮಾಡಲಾಗಿದೆ. ಈ ಹಣಕಾಸು ವರ್ಷದಲ್ಲಿ 11,000 ಕಿ.ಮೀ ರಸ್ತೆ ನಿರ್ಮಿಸುವ ಮಹತ್ವಾಕಾಂಕ್ಷೆಯ ಗುರಿ ಇದೆ ಎಂದು ಸಚಿವಾಲಯ ತಿಳಿಸಿದೆ.

ಏಪ್ರಿಲ್‌ನಿಂದ ಸೆಪ್ಟೆಂಬರ್‌ ತಿಂಗಳೊಳಗೆ 1,330 ಕಿ.ಮೀ. ಹೆದ್ದಾರಿ ನಿರ್ಮಿಸುವ ಯೋಜನೆ ಇದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ಈ ಹಿಂದೆ ತಿಳಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಸ್ತೆ ನಿರ್ಮಾಣ ಪ್ರಮಾಣ ಶೇಕಡ 60ರಷ್ಟು ಹೆಚ್ಚಳ ಕಂಡಿದೆ. ಎನ್‌ಎಚ್‌ಎಐ ನೀಡಿರುವ ಯೋಜನೆಗಳ ಒಟ್ಟು ಮೌಲ್ಯ ₹ 47,289 ಕೋಟಿ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.