ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಹಾನಿ ಪರಿಹಾರ: ₹ 418 ಕೋಟಿ ಬಿಡುಗಡೆ

Last Updated 23 ನವೆಂಬರ್ 2021, 16:46 IST
ಅಕ್ಷರ ಗಾತ್ರ

ಬೆಂಗಳೂರು: ಜುಲೈ ತಿಂಗಳಿನಿಂದ ಈವರೆಗೆ ಸುರಿದ ಅತಿವೃಷ್ಟಿಯಿಂದ ಬಾಧಿತರಾದ ಸಂತ್ರಸ್ತರಿಗೆ ಪರಿಹಾರ ವಿತರಿಸಲು ರಾಜ್ಯ ವಿಕೋಪ ಪರಿಹಾರ ನಿಧಿಯಿಂದ ₹418.72 ಕೋಟಿ ಅನುದಾನ ಬಿಡುಗಡೆ ಮಾಡಿ ಕಂದಾಯ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

21 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿದ್ದ ಪ್ರವಾಹ, ಬಳಿಕ ಆಗಸ್ಟ್‌ನಿಂದ ನವೆಂಬರ್‌ ವರೆಗೆ ಸುರಿದ ಮಳೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡಲು ಈ ಮೊತ್ತವನ್ನು ಬಳಕೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅತಿವೃಷ್ಟಿಯಿಂದ ಸಂತ್ರಸ್ತರಾಗಿರುವ 85,862 ಕುಟುಂಬಗಳಿಗೆ ಗೃಹೋಪಯೋಗಿ ವಸ್ತುಗಳ ಹಾನಿಯ ಬಾಬ್ತು ಪರಿಹಾರ ವಿತರಿಸಲು ₹ 85.86 ಕೋಟಿ ಒದಗಿಸಲಾಗಿದೆ. ಹಾನಿಗೀಡಾದ ಮನೆಗಳಿಗೆ ಪರಿಹಾರ ನೀಡಲು ₹ 332.86 ಕೋಟಿ ಅನುದಾನ ಒದಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT