ಸೋಮವಾರ, ಜೂನ್ 21, 2021
27 °C

ಬೆಳಗಾವಿಯಲ್ಲಿ 459 ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಇಲ್ಲಿನ ಬಿಮ್ಸ್‌ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ 459 ಮಂದಿ ಗುಣಮುಖರಾಗಿದ್ದು, ಅವರನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 4,658ಕ್ಕೆ ಏರಿಕೆಯಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. 

‘ಹೊಸದಾಗಿ 395 ಮಂದಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಬೆಳಗಾವಿ ನಗರ ಹಾಗೂ ತಾಲ್ಲೂಕಿನವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗೋಕಾಕ, ಖಾನಾಪುರ, ಸವದತ್ತಿ, ರಾಮದುರ್ಗ, ಹುಕ್ಕೇರಿ, ರಾಯಬಾಗದಲ್ಲಿ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8ಸಾವಿರದ ಗಡಿ ದಾಟಿದೆ. 3,581 ಸಕ್ರಿಯ ಪ್ರಕರಣಗಳಿವೆ. ಮಂಗಳವಾರದವೆಗೆ 465 ಮಂದಿಯ ‍ಪರೀಕ್ಷಾ ವರದಿ ಬರುವುದು ಬಾಕಿ ಇದೆ’.

‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ 7 ಮಂದಿ ಚಿಕಿತ್ಸೆಗೆ ಸ್ಪಂದಿಸಿದೆ ಸಾವಿಗೀಡಾಗಿರುವುದು ವರದಿಯಾಗಿದೆ. ಇವರಲ್ಲಿ ಬೆಳಗಾವಿ ತಾಲ್ಲೂಕಿನ ಐವರು ಹಾಗೂ ಗೋಕಾಕ ಮತ್ತು ಚಿಕ್ಕೋಡಿ ತಾಲ್ಲೂಕಿನ ತಲಾ ಇಬ್ಬರಿದ್ದಾರೆ. ಸರಾಸರಿ 55ರಿಂದ 78 ವರ್ಷದವರಾದ ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು