ಸೋಮವಾರ, ಮಾರ್ಚ್ 27, 2023
24 °C

484 ಮಕ್ಕಳು ನಾಪತ್ತೆ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿನ ವಿವಿಧ ಬಾಲಮಂದಿರಗಳಿಂದ ಈವರೆಗೆ 484 ಮಕ್ಕಳು ನಾಪತ್ತೆಯಾಗಿದ್ದಾರೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಅನುಪಾಲನಾ ವರದಿ ನೀಡಿದರು. ವರದಿ ದಾಖಲಿಸಿಕೊಂಡ ನ್ಯಾಯಪೀಠ, ‘ಈ ವರದಿಯ ನಂತರ ಕೈಗೊಂಡಿರುವ ಕ್ರಮಗಳ ವಸ್ತುಸ್ಥಿತಿ ವರದಿಯನ್ನು 4 ವಾರಗಳಲ್ಲಿ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿದರು.

ಸರ್ಕಾರದ ಅಧೀನದಲ್ಲಿರುವ ಬಾಲ ಮಂದಿರಗಳಿಂದ ಕೆಲ ವರ್ಷಗಳಲ್ಲಿ 141 ಮಕ್ಕಳು ನಾಪತ್ತೆಯಾಗಿದ್ದಾರೆ‘ ಎಂದು ಅರ್ಜಿದಾರರು ಆರೋಪಿಸಿದ್ದರು. ‘ನಾಪತ್ತೆಯಾದ ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ಕ್ರಮಗಳ ವರದಿ ಸಲ್ಲಿಸಿ’ ಎಂದು 2022ರ ಫೆ. 22ರಂದು ನ್ಯಾಯಪೀಠ ಆದೇಶಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು