ಶಿರಾ:‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂಬುದನ್ನು ಅರಿತು ಆ ಪಕ್ಷದ ಅವರು ಶಾಸಕರು ಬಿಜೆಪಿಗೆ ಸೇರಲು ಸಿದ್ಧರಾಗಿದ್ದಾರೆ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಪರ ಪ್ರಚಾರ ಸಭೆಯಲ್ಲಿ ಶುಕ್ರವಾರ ಅವರು ಮಾತನಾಡಿದರು.

ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಪಕ್ಷದ ಬಲವೂ ಹೆಚ್ಚಲಿದೆ. ಕಾಂಗ್ರೆಸ್‌ನ 5 ಶಾಸಕರು ಬಿಜೆಪಿಗೆ ಬರುವುದರಿಂದ ಕಾಂಗ್ರೆಸ್ ಯಾವ ಮಟ್ಟಕ್ಕೆ ತಲುಪುತ್ತದೆ ಎನ್ನುವುದು ತಿಳಿಯದಾಗಿದೆ ಎಂದರು.

‘ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಮತ್ತು ನಾನು ಆತ್ಮೀಯರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಮೋದಿ ಆಡಳಿತ ಮೆಚ್ಚಿ ಅವರು, ಬಿಜೆಪಿ ಅಭ್ಯರ್ಥಿಗೆ ಮತ ಹಾಕಿಸಿದ್ದರು. ಈಗಲೂ ಅವರು ಒತ್ತಡದಿಂದ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಮತದಾರರು ಅರಿತುಕೊಳ್ಳಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.