ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 5 ಲಕ್ಷ ಮಂದಿ ಗುಣಮುಖ

Last Updated 3 ಅಕ್ಟೋಬರ್ 2020, 17:24 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಮತ್ತೆ 8,989 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ.

ರಾಜ್ಯದಲ್ಲಿ ಜುಲೈ ತಿಂಗಳ ಬಳಿಕ ಸೋಂಕಿತರ ಜತೆಗೆ ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ಮುಂದಿನ ಎರಡು ತಿಂಗಳುಗಳಲ್ಲಿ 4.58 ಲಕ್ಷ ಮಂದಿ ಗುಣಮಖರಾಗಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 9,886 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 6.30 ಲಕ್ಷಕ್ಕೆ ಏರಿಕೆಯಾಗಿದೆ. ಶನಿವಾರ ಒಂದೇ ದಿನ 84 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ 51.74 ಲಕ್ಷ ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಕೊರೊನಾ ಸೋಂಕಿತರಲ್ಲಿ ಬೆಂಗಳೂರಿನಲ್ಲಿ 21 ಮಂದಿ ಸೇರಿದಂತೆ ರಾಜ್ಯದಲ್ಲಿ 100 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 9,219ಕ್ಕೆ ತಲುಪಿದೆ.ಸದ್ಯ 1.12 ಲಕ್ಷ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. 841 ಸೋಂಕಿತರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಮತ್ತೆ 3,925 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2.45 ಲಕ್ಷಕ್ಕೆ ತಲುಪಿದೆ. ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದ್ದ ಮೈಸೂರಿನಲ್ಲಿ ಹೊಸದಾಗಿ 1,514 ಪ್ರಕರಣಗಳು ಪತ್ತೆಯಾಗಿವೆ. ಹಾಸನದಲ್ಲಿ ಹೊಸದಾಗಿ 460 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಶಿವಮೊಗ್ಗ (337), ತುಮಕೂರು (302) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT