ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ತೆರಿಗೆಯಲ್ಲಿ ಶೇ 5ರಷ್ಟು ವಿನಾಯಿತಿ: ಅವಧಿ ವಿಸ್ತರಣೆ

Last Updated 23 ಜೂನ್ 2021, 4:16 IST
ಅಕ್ಷರ ಗಾತ್ರ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸಲಾಗುವ 2021-22ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆ
ಮೇಲಿನ ಶೇ 5ರಷ್ಟು ರಿಯಾಯಿತಿ ಹಾಗೂ ವಿಳಂಬದ ಅವಧಿಗೆ ದಂಡ ವಿಧಿಸುವ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇ 5ರ ರಿಯಾಯಿತಿ ಅವಧಿಯನ್ನು ಈ ಹಿಂದೆ ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಇದೀಗ, ಕೋವಿಡ್‌ ಕಾರಣಕ್ಕೆ ಆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ಆಸ್ತಿ ತೆರಿಗೆ ಪಾವತಿಸದೇ ಇದ್ದರೆ ಜುಲೈ ತಿಂಗಳಿನಿಂದ ವಿಳಂಬದ ಅವಧಿಗೆ ಮಾಸಿಕ ಶೇ 2ರಷ್ಟು ದಂಡ ವಿಧಿಸಲಾಗುತ್ತದೆ. ಆ ಅವಧಿಯನ್ನು ಆಗಸ್ಟ್‌ 1ರಿಂದ ಅನ್ವಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆಗಳಿಗೆ (ಬಿಬಿಎಂಪಿ ಹೊರತುಪಡಿಸಿ) ಸೂಚಿಸಲಾಗಿದೆ.

ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಕಾರಣ ಸರ್ಕಾರ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ವ್ಯಾಪಾರ ವಹಿವಾಟುಗಳನ್ನು ಜೂನ್ 14ರವರೆಗೆ ಸ್ಥಗಿತಗೊಳಿಸಿತ್ತು. ಹೀಗಾಗಿ, ಆಸ್ತಿ ತೆರಿಗೆ ಪಾವತಿಯ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT