ಖಾನಾಪುರ (ಬೆಳಗಾವಿ ಜಿಲ್ಲೆ): ಇಲ್ಲಿ ಸೋಮವಾರ ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಹಾಗೂ ಸಂಸದರ ಕಾರಿಗೆಮುತ್ತಿಗೆ ಹಾಕಲು ಮುಂದಾದ 50 ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

‘ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು ಕೋವಿಡ್–19ನಿಂದಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬರಲು ಸಾಧ್ಯವಾಗದಿರುವ ಸಮಯವನ್ನೇ ನೋಡಿಕೊಂಡು ಕಾರ್ಯಕ್ರಮ ಮಾಡಲಾಗುತ್ತಿದೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ. ಇದಕ್ಕೆ ನಮ್ಮ ವಿರೋಧವಿದೆ. ಶಾಸಕರು ಗುಣಮುಖರಾಗುವವರೆಗೂ ಮುಂದೂಡಬೇಕು’ ಎಂದು ಒತ್ತಾಯಿಸಿದರು.

‘ಭೂಮಿ ಪೂಜೆಗೆ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ’ ಎಂದು ಆರೋಪಿಸಿದರು.

ಸಂಸದರು ಬರುವುದಕ್ಕೆ ಮುನ್ನವೇ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್ ಕಚೇರಿ ಆವರಣಕ್ಕೆ ಅವರನ್ನು ಕರೆದೊಯ್ದರು. ತಮ್ಮನ್ನು ವಶಕ್ಕೆ ಪಡೆದ ಪೊಲೀಸರ ಕ್ರಮದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.