Covid-19 Karnataka Update: 501 ಹೊಸ ಪ್ರಕರಣ ದೃಢ, 4 ಮಂದಿ ಸಾವು

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳಲ್ಲಿ 501 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,33,578 ಕ್ಕೆ ಏರಿಕೆಯಾಗಿದೆ. ಆ ಪೈಕಿ 12,185 ಮಂದಿ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 9,13,677 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 168 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ 7,697 ಸಕ್ರಿಯ ಪ್ರಕರಣಗಳಿವೆ.
ಈವರೆಗೆ ಒಟ್ಟು 1,61,33,663 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂಗ್ಲೆಂಡ್‌ನಿಂದ ರಾಜ್ಯಕ್ಕೆ ಬಂದ 14 ಜನರಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಇಂದಿನ 20/01/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/P8A0wzBs1y pic.twitter.com/ihz5s2S0Cy
— K'taka Health Dept (@DHFWKA) January 20, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.