ಶನಿವಾರ, ಜುಲೈ 2, 2022
20 °C

ಧರ್ಮಸ್ಥಳ: 50ನೇ ವರ್ಷದ ಸಾಮೂಹಿಕ ವಿವಾಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಬುಧವಾರ ಸಂಜೆ 6.30ರ ಗೋಧೂಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹಗಳು ನಡೆದವು.

ಗಣ್ಯರು ಮತ್ತು ಹಿರಿಯರ ಸಮ್ಮುಖದಲ್ಲಿ 183 ಜತೆ ನವ ವಧು- ವರರು ದಾಂಪತ್ಯ ಜೀವನಕ್ಕೆ ಅಡಿ ಇಟ್ಟರು. ಬೆಳಿಗ್ಗೆ ಹೆಗ್ಗಡೆ ಅವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತು ರವಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಲಾಯಿತು. ಸಂಜೆ 5 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು, ಅಮೃತವರ್ಷಿಣಿ ಸಭಾಭವನದಲ್ಲಿ ಮದುವೆ ಮಂಟಪಕ್ಕೆ ಪ್ರವೇಶಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಕಂದಾಯ ಸಚಿವ ಆರ್. ಅಶೋಕ, ಚಿತ್ರ ನಟ ಗಣೇಶ್ ಮತ್ತು ಗಣ್ಯರು ಮಂಗಳಸೂತ್ರ ನೀಡಿ, ನೂತನ ವಧು– ವರರಿಗೆ ಶುಭ ಹಾರೈಸಿದರು.

ಜಾತಿ- ಮತ, ಅಂತಸ್ತಿನ ಭೇದ ಮರೆತು 60 ಜೋಡಿ ಅಂತರ್‌ ಜಾತೀಯ ವಿವಾಹ ನಡೆದಿರುವ ಬಗ್ಗೆ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ‘ಧರ್ಮಸ್ಥಳ ಕ್ಷೇತ್ರದಲ್ಲಿ ಮದುವೆಯಾದವರು ಪರಸ್ಪರ ಅರಿತುಕೊಂಡು ಶಾಂತಿ- ಸಹನೆ ಮತ್ತು ಪ್ರೀತಿ- ವಿಶ್ವಾಸದಿಂದ ನೆಮ್ಮದಿಯ ಜೀವನ ನಡೆಸಬೇಕು. ಮದುವೆಯ ಪಾವಿತ್ರ್ಯವನ್ನು ಅರ್ಥ ಮಾಡಿಕೊಂಡು ಸಾರ್ಥಕ ಜೀವನ ನಡೆಸಿ’ ಎಂದು ಹಾರೈಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು