ಶುಕ್ರವಾರ, ಸೆಪ್ಟೆಂಬರ್ 17, 2021
29 °C
ಧ್ವಜಾರೋಹಣ ನೆರವೇರಿಸಿದ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ

ಕೃಷಿ ಸಮ್ಮಾನ್ ಯೋಜನೆಯಡಿ 2.68 ಲಕ್ಷ ರೈತರಿಗೆ ₹ 517 ಕೋಟಿ ವಿತರಣೆ: ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2.68 ಲಕ್ಷ ರೈತರಿಗೆ ₹ 517.38 ಕೋಟಿ ಆರ್ಥಿಕ ನೆರವು ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ‌ನಿರಾಣಿ ತಿಳಿಸಿದರು.

ಜಿಲ್ಲಾಡಳಿತ ಇಲ್ಲಿನ ‌ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ‌ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಯೋಜನೆಯಡಿ ಕೇಂದ್ರ ಸರ್ಕಾರ ₹ 6 ಸಾವಿರ ಹಾಗೂ ರಾಜ್ಯ ಸರ್ಕಾರ ₹ 4 ಸಾವಿರ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ ಎಂದರು.

ಜಿಲ್ಲೆಯ 1000 ಎಕರೆ ಪ್ರದೇಶದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಮಂಜೂರಾಗಿದ್ದು, ಜ್ಯುವೆಲರಿ ಪಾರ್ಕ್ ಸಹ ಅಭಿವೃದ್ಧಿಪಡಿಸಲು ಉದ್ದೇಶ ಹೊಂದಲಾಗಿದೆ. ಜಿಲ್ಲೆಯಲ್ಲಿ ವಾಯು ಸಂಪರ್ಕ ಹೊಂದಿದ್ದರಿಂದ ಉದ್ಯಮಿಗಳನ್ನು ಇಲ್ಲಿ ಹೂಡಿಕೆಗೆ ಆಕರ್ಷಿಸಲು ಉದ್ದೇಶಿತ ಯೋಜನೆಗಳ ಹೊರತಾಗಿ ಒಂದೇ ಕಡೆ 5000 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಂಡು ಇಂಡಸ್ಟ್ರಿಯಲ್ ಹಬ್ ಆಗಿ ಪರಿವರ್ತಿಸುವ ಚಿಂತನೆ ಇದೆ ಎಂದರು.

ಸಂಸದ ಡಾ.ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮೂಡ, ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಸುನೀಲ್ ವಲ್ಯಾಪುರ, ಕ್ರೆಡೆಲ್ ಅಧ್ಯಕ್ಷ ‌ಚಂದು ಪಾಟೀಲ, ರಾಜ್ಯ ಮಹಿಳಾ ಅಭಿವೃದ್ಧಿ ‌ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್, ಈಶಾನ್ಯ ವಲಯದ ಐಜಿಪಿ‌ ಮನೀಷ್ ಖರ್ಬೀಕರ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಎಸ್ಪಿ ಡಾ.ಸಿಮಿ ಮರಿಯಂ ಜಾರ್ಜ್, ಜಿ.ಪಂ. ಸಿಇಓ ಡಾ.ದಿಲೀಷ್ ಶಶಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು