ಮಂಗಳವಾರ, ಜೂನ್ 15, 2021
27 °C

6 ಕಂಟೇನರ್‌ ಆಮ್ಲಜನಕ: ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟಾಟಾನಗರದಿಂದ 6 ದ್ರವೀಕೃತ ಆಮ್ಲಜನಕ ಕಂಟೇನರ್‌ಗಳನ್ನು ಹೊತ್ತ ‘ಆಕ್ಸಿಜನ್‌ ಎಕ್ಸ್‌ಪ್ರೆಸ್’ ರೈಲು ಮಂಗಳವಾರ ಬೆಳಗ್ಗೆ ಬೆಂಗಳೂರು ತಲುಪಿದ್ದು ಕೇಂದ್ರ ನಾಯಕರಿಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಧನ್ಯವಾದ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ನಾಯಕರಾದ ಪಿಯೂಷ್‌ ಗೋಯಲ್‌, ಸದಾನಂದ ಗೌಡ ಹಾಗೂ ಪ್ರಹ್ಲಾದ್‌ ಜೋಷಿ ಅವರಿಗೆ ಟ್ವೀಟ್‌ ಮೂಲಕ ಧನ್ಯವಾದ ಹೇಳಿದ್ದಾರೆ.

120 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್‌ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗೆ ಸಹಕರಿಸಿದ ಕೇಂದ್ರ ಸಚಿವರುಗಳು ಹಾಗೂ ರಾಜ್ಯದ ಅಭಿವೃದ್ಧಿಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.

ಇದನ್ನು ಓದಿ: ಬೆಂಗಳೂರು ತಲುಪಿದ 120 ಟನ್‌ ಆಮ್ಲಜನಕ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು