ಬುಧವಾರ, ಮೇ 18, 2022
23 °C

ಮಗು ದತ್ತು ಪಡೆದರೆ 6 ತಿಂಗಳು‌‌ ರಜೆ: ಕೆಎಸ್ಆರ್‌ಟಿಸಿ ಸುತ್ತೋಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಗುವನ್ನು ದತ್ತು ಪಡೆಯುವ ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ರಜೆ ನೀಡಲು ಕೆಎಸ್ಆರ್‌ಟಿಸಿ ಸುತ್ತೋಲೆ ಹೊರಡಿಸಿದೆ.

ಮಗುವನ್ನು ದತ್ತು ಪಡೆದ ದಿನಾಂಕದಿಂದ ಒಂದು ವರ್ಷದ ಅವಧಿಗೆ ಅಥವಾ ಆ ಮಗುವಿಗೆ ಒಂದು ವರ್ಷ ಪೂರ್ಣಗೊಳ್ಳುವ ತನಕ ಇವುಗಳಲ್ಲಿ ಯಾವುದು ಮೊದಲು ಅಲ್ಲಿ ತನಕ 180 ದಿನಗಳ ಈ ರಜೆಗಳನ್ನು ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಪ್ರಕಾರ ಅವಕಾಶ ಕಲ್ಪಿಸಲಾಗಿದೆ.

ಮಗುವನ್ನು ದತ್ತು ಪಡೆದ ಸಂದರ್ಭದಲ್ಲಿ ಉದ್ಯೋಗಿ ಮಹಿಳೆ ಎರಡು ಜೀವಂತ ಮಕ್ಕಳನ್ನು ಹೊಂದಿರಬಾರದು ಎಂಬ ಷರತ್ತು ಆಧರಿಸಿ ರಜೆ ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು