ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ₹ 60 ಕೋಟಿ: ನಾರಾಯಣಗೌಡ

Last Updated 10 ಫೆಬ್ರುವರಿ 2021, 19:34 IST
ಅಕ್ಷರ ಗಾತ್ರ

ಬೆಂಗಳೂರು:‘ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿ ನಲ್ಲಿ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಎಚ್ಎಸ್ಆರ್ ಲೇಔಟ್‍ನಲ್ಲಿ ₹ 60 ಕೋಟಿ ವೆಚ್ಚದಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಿಸಲಾಗುವುದು’ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋ ಜನೆ ಮತ್ತು ಸಾಂಖ್ಯಿಕ ಸಚಿವ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದರು.

ವಿಕಾಸಸೌಧದಲ್ಲಿ ಬುಧವಾರ ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿ ವೃದ್ಧಿ ಮಂಡಳಿ’ಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ‘ವಸತಿ ನಿಲಯ ನಿರ್ಮಾಣಕ್ಕೆ ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯ ಲಾಗುವುದು. ಮಾರ್ಚ್ ಒಳಗೆ ಪ್ರಕ್ರಿಯೆ ಮುಗಿಸಿ ಕಾಮಗಾರಿ ಆರಂಭಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಮಂಡಳಿ ಸ್ಥಾಪನೆಯಾದ ಬಳಿಕ ಈವರೆಗೆ ₹ 5,348 ಕೋಟಿ ಅನುದಾನ ಬಿಡುಗಡೆಯಾಗಿದೆ. 2020-21ನೇ ಸಾಲಿನಲ್ಲಿ ₹ 1,131 ಕೋಟಿ ಅನುದಾನ ಹಂಚಿಕೆಯಾಗಿದೆ. ಇತರ ಇಲಾಖೆಗಳು ಹಾಗೂ ವಿಶೇಷ ಅಭಿವೃದ್ಧಿ ಯೋಜನೆಯಡಿ ಹೆಚ್ಚಿನ ಅನುದಾನ ಈ ಭಾಗಕ್ಕೆ ನೀಡಲಾಗುತ್ತಿದ್ದರೂ ಕಣ್ಣಿಗೆ ಕಾಣುವಂಥ ಅಭಿವೃದ್ಧಿ ಆಗಿಲ್ಲ’ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

‘ಮಂಜೂರಾದ 4,016 ಕಾಮಗಾರಿ ಗಳಲ್ಲಿ ಈವರೆಗೆ 2,176 ಮಾತ್ರ ಪೂರ್ಣ ಗೊಂಡಿವೆ. ಆರಂಭವಾಗದ 401 ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು. ಈ ಭಾಗದ ಅಭಿವೃದ್ಧಿಗೆ ಮುಖ್ಯಮಂತ್ರಿ ಪಣ ತೊಟ್ಟಿದ್ದಾರೆ. ಹಂಚಿಕೆಯಾದ ಅನು ದಾನ ಶೇ 100ರಷ್ಟು ಬಳಕೆಯಾಗ ಬೇಕು. ವಿಮಾನ ನಿಲ್ದಾಣ, ರೈಲ್ವೆ, ಹೆದ್ದಾರಿ, ಹೈಟೆಕ್ ಆಸ್ಪತ್ರೆಗಳು, ಕೃಷಿ, ತೋಟ ಗಾರಿಕೆ ಬೆಳೆಗಳ ಅತ್ಯಾಧುನಿಕ ಮಾರು
ಕಟ್ಟೆ ನಿರ್ಮಾಣ ಕಾಮಗಾರಿಗಳಿಗೆ ಅನು ದಾನ ಬಳಕೆ ಮಾಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT