ಶನಿವಾರ, ಮೇ 21, 2022
19 °C
ಜೆಡಿಎಸ್‌ ನಾಯಕ

ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವವರೇ ₹ 6,000 ಕೋಟಿ ದೋಚಿರಬಹುದು: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಟ್‌ಕಾಯಿನ್‌ ಹಗರಣದಲ್ಲಿ ಭಾಗಿಯಾಗಿರುವ ತಂಡವೇ ಜನ್‌ಧನ್‌ ಖಾತೆಗಳಿಂದ ತಲಾ ₹ 2ರಂತೆ ₹ 6,000 ಕೋಟಿಯಷ್ಟು ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಇಷ್ಟೊಂದು ದೊಡ್ಡ ಮೊತ್ತದ ಹಣದ ಅಕ್ರಮ ವರ್ಗಾವಣೆ ಹಿಂದೆ ಯಾರಿದ್ದಾರೆ ಎಂಬ ಮಾಹಿತಿ ಜನರಿಗೆ ತಿಳಿಯಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹುಶಃ ಈ ಎಲ್ಲ ಮಾಹಿತಿ ಚೆನ್ನಾಗಿ ತಿಳಿದಿದೆ. ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಬಹುದು’ ಎಂದರು.

ಬಿಟ್‌ಕಾಯಿನ್‌ ಹಗರಣದ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದೆ. ಆ ಕಲ್ಲು ಯಾರಿಗೆ ಬೀಳುತ್ತದೆ? ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರ ಸಮೀಪವರ್ತಿಗಳ ಕೆಲವು ಹೆಸರುಗಳು ಈಗಾಗಲೇ ಬಹಿರಂಗವಾಗಿವೆ. ಆದರೆ, ಕಾಂಗ್ರೆಸ್‌ ನಾಯಕರು ಬಿಜೆಪಿಯವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರ ಏನು ಮಾಡುತ್ತಿದೆ?: ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಂತ್ರಿಗಳು, ಅಧಿಕಾರಿಗಳು ಏನು ಮಾಡುತ್ತಿದ್ದಾರೋ ತಿಳಿಯದು. ರಾಜ್ಯದಲ್ಲಿ ಸರ್ಕಾರ ಇದೆಯೋ? ಇಲ್ಲವೋ? ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು