ಬೆಂಗಳೂರು: ‘ರಾಜ್ಯದಲ್ಲಿ ಜನವರಿ ತಿಂಗಳಲ್ಲಿ ₹ 6,085 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿದ್ದು, ಇದೊಂದು ದಾಖಲೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಜಿಎಸ್‌ಟಿ ಸಂಗ್ರಹದಲ್ಲಿ ಶೇ 30ರಷ್ಟು ಅತ್ಯಧಿಕ ಬೆಳವಣಿಗೆ ಹೊಂದಿರುವ ರಾಜ್ಯವಾಗಿ ಕರ್ನಾಟಕ ಮುಂದುವರಿದಿದೆ’ ಎಂದಿದ್ದಾರೆ.
‘ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಸಾಧನೆ ಸಾಧ್ಯವಾಗಿದೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಬಜೆಟ್ ಮಂಡಿಸಲು ಅವಕಾಶ ಸಿಗಲಿದೆ’ ಎಂದೂ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.