ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯೋತ್ಸವ ಪ್ರಶಸ್ತಿಗೆ 6,210 ಅರ್ಜಿ

Last Updated 16 ಅಕ್ಟೋಬರ್ 2021, 19:45 IST
ಅಕ್ಷರ ಗಾತ್ರ

ಬೆಂಗಳೂರು: 2021-22ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗೆ 6,210 ಅರ್ಜಿಗಳು ಸಲ್ಲಿಕೆ ಆಗಿವೆ. ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಅರ್ಜಿಗಳು ಬಂದಿವೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ನೇರವಾಗಿ 1,450 ಅರ್ಜಿಗಳು ಹಾಗೂ ‘ಸೇವಾ ಸಿಂಧು’ ಪೋರ್ಟಲ್‌ ಮೂಲಕ 4,770 ಹೆಸರುಗಳು ಬಂದಿವೆ.‌ ಈ ಹೆಸರುಗಳನ್ನು 28,857 ಜನರು ಆನ್‌ಲೈನ್‌ ಮೂಲಕ ಶಿಫಾರಸ್ಸು ಮಾಡಿದ್ದಾರೆ.

ಈ ವರ್ಷ ಮೊದಲ ಬಾರಿ ಆನ್‌ಲೈನ್ (ಸೇವಾ ಸಿಂಧು) ಮೂಲಕ ಹೆಸರು ಶಿಫಾರಸು ಮಾಡಲು ಅವಕಾಶ ನೀಡಲಾಗಿತ್ತು. 2018-19ನೇ ಸಾಲಿನ ಪ್ರಶಸ್ತಿಗೆ 1,300, 2019-20ನೇ ಸಾಲಿಗೆ 1,191, 2020-21ನೇ ಸಾಲಿನಲ್ಲಿ 1,144 ಅರ್ಜಿಗಳು ಬಂದಿದ್ದವು.

‘ಅರ್ಜಿ ಸಲ್ಲಿಕೆಗೆ ಆನ್‌ಲೈನ್‌ ವ್ಯವಸ್ಥೆ ಮಾಡಿರುವುದರಿಂದ ಹೆಚ್ಚು ಜನರು ನೇರವಾಗಿ ಭಾಗಿಯಾಗಿದ್ದು ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚಿನ ಗೌರವ ತಂದಿದೆ. ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT