ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಒಂದೇ ದಿನ 815 ಮಂದಿ ಗುಣಮುಖ

Last Updated 21 ಜನವರಿ 2021, 16:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಂದೇ ದಿನ 815 ಕೋವಿಡ್‌ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಾದ್ಯಂತ 24 ಗಂಟೆಗಳಲ್ಲಿ 674 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,34,252ಕ್ಕೆ ಏರಿಕೆಯಾಗಿದೆ. ಆ ಪೈಕಿ 12,187 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 9,14,492 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 171 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ 7,554 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರಿನಲ್ಲಿ 371 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT