ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

14ರಂದು ಸೇಡಂನಲ್ಲಿ 69ನೇ ಸಹಕಾರ ಸಪ್ತಾಹ

ಮುಖ್ಯಮಂತ್ರಿಗಳಿಂದ ಸಹಕಾರ ರತ್ನ ಪ್ರಶಸ್ತಿ ಪ್ರದಾನ, ಯಶಸ್ವಿನಿ ಕಾರ್ಡ್ ವಿತರಣೆ
Last Updated 11 ನವೆಂಬರ್ 2022, 19:47 IST
ಅಕ್ಷರ ಗಾತ್ರ

ಕಲಬುರಗಿ: ‘ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕಲಬುರಗಿ–ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ(ಡಿಸಿಸಿ) ಬ್ಯಾಂಕ್ ಸೇರಿ ಇತರೆ ಆರು ಸಂಘಟನೆಗಳು ಜೊತೆಗೂಡಿ ಜಿಲ್ಲೆಯ ಸೇಡಂನಲ್ಲಿ ನವೆಂಬರ್ 14ರಂದು 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿವೆ’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಅವರು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡುವರು ಮತ್ತು ಯಶಸ್ವಿನಿ ಕಾರ್ಡ್ ವಿತರಿಸುವರು. ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಸಪ್ತಾಹದ ಸಮಾರೋಪ ಸಮಾರಂಭ ಮೈಸೂರಿನಲ್ಲಿ ಜರುಗಲಿದೆ. ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರು ವಿಭಾಗ ಸೇರಿ ರಾಜ್ಯದ 7 ವಿಭಾಗಗಳಲ್ಲಿ ಸಹಕಾರ ಸಪ್ತಾಹ ಸಮಾರಂಭ ನಡೆಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT