ಮೇ 7ಕ್ಕೆ 70 ಪಶು ಆಂಬುಲೆನ್ಸ್ ಸೇವೆ: ಪ್ರಭು ಚವ್ಹಾಣ
ಬೆಂಗಳೂರು: ಮೇ 7 ರಂದು ಬೆಂಗಳೂರಿನಲ್ಲಿ 70 ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ.
ವಿಕಾಸಸೌಧದ ಆವರಣದಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳನ್ನು (ಆಂಬುಲೆನ್ಸ್) ಪರೀಕ್ಷಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
2021–22 ನೇ ಸಾಲಿನ ಕೇಂದ್ರ ಸರ್ಕಾರದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮ ಅನುದಾನದಲ್ಲಿ ಅಗತ್ಯ ತುರ್ತುಸೇವೆ ಒದಗಿಸಲು ರಾಜ್ಯಕ್ಕೆ 275 ಸಂಚಾರಿ ಪಶು ಚಿಕಿತ್ಸಾ ವಾಹನ ಒದಗಿಸಲಾಗಿದೆ. ಈ ಪೈಕಿ 70 ವಾಹನಗಳನ್ನು ಜಾನುವಾರು ಸೇವೆಗೆ ಬಳಸಲಾಗುವುದು ಎಂದು ಹೇಳಿದರು.
ಮೇ 7ರ ಕಾರ್ಯಕ್ರಮದಲ್ಲಿ ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ್ ರೂಪಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಭಾಗವಹಿಸುವರು ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.