ಶುಕ್ರವಾರ, ಡಿಸೆಂಬರ್ 2, 2022
20 °C

7ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಸೌಲಭ್ಯಗಳ ಪರಿಷ್ಕರಣೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಂ.ಎಸ್‌ ಬಿಲ್ಡಿಂಗ್‌ (ಬಹುಮಹಡಿ ಕಟ್ಟಡ) ಮುಂಭಾಗದಲ್ಲಿ ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಮತ್ತು ಇಲಾಖಾ ಹಾಗೂ ವೃಂದ ಸಂಘಗಳ ಜಂಟಿ ಕ್ರಿಯಾ ಸಮಿತಿ ಗುರುವಾರ ಪ್ರತಿಭಟನೆ ಹಮ್ಮಿಕೊಂಡಿದೆ.

‘ಬೆಳಿಗ್ಗೆ 10.30ರಿಂದ 5 ಗಂಟೆಯವರೆಗೆ ಈ ಧರಣಿ ನಡೆಯಲಿದೆ. ಎಲ್ಲ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ’ ಎಂದು ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಎಂದು ಪಿ. ಗುರುಸ್ವಾಮಿ ತಿಳಿಸಿದ್ದಾರೆ.

‘ಕೋವಿಡ್‌ ಅವಧಿಯಲ್ಲಿ ಮುಟ್ಟಗೋಲು ಹಾಕಿಕೊಂಡಿರುವ ನೌಕರರ ಮತ್ತು ಪಿಂಚಣಿದಾರರ 18 ತಿಂಗಳ ತುಟ್ಟಿಭತ್ಯೆ ತಕ್ಷಣ ಬಿಡುಗಡೆ ಮಾಡಬೇಕು, 2022ರ ಜುಲೈನಿಂದ ಜಾರಿಗೆ ಬರುವಂತೆ ಶೇ 25ರಷ್ಟು ಮಧ್ಯಂತರ ಪರಿಹಾರವನ್ನೂ ಕೂಡಲೇ ಘೋಷಿಸಬೇಕು, ನೂತನ ಪಿಂಚಣಿ ಪದ್ಧತಿಯನ್ನು ರದ್ದುಪಡಿಸಿ ನಿಶ್ಚಿತ ಪಿಂಚಣಿ ಪದ್ಧತಿ ಮತ್ತೆ ಆರಂಭಿಸಬೇಕು, ಆಡಳಿತ ಸುಧಾರಣಾ ಆಯೋಗ–2 ರ ವರದಿಯಲ್ಲಿರುವ ನೌಕರ ವಿರೋಧಿ ಶಿಫಾರಸುಗಳನ್ನು ಕೈಬಿಡಬೇಕು, ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದೂ ಕ್ರಿಯಾ ಸಮಿತಿ ಬೇಡಿಕೆ ಮುಂದಿಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.