ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಸಾವಿರ ಸ್ಮಾರ್ಟ್‌ ಕ್ಲಾಸ್‌ ರೂಂ: ಅಶ್ವತ್ಥನಾರಾಯಣ

Last Updated 18 ಫೆಬ್ರುವರಿ 2021, 19:49 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನೋತ್ತರ ಕಾಲದಲ್ಲಿ ಡಿಜಿಟಲ್‌ ಕಲಿಕೆ ಪ್ರೋತ್ಸಾಹಿಸಲು ಆರು ತಿಂಗಳಲ್ಲಿ ಎಂಟು ಸಾವಿರ ಸ್ಮಾರ್ಟ್‌ಕ್ಲಾಸ್‌ ರೂಂ ನಿರ್ಮಾಣ ಮಾಡಲಾಗುವುದು’ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ಗುರುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ ನಿಟ್ಟಿನಲ್ಲಿ ರಾಜ್ಯದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರತಿ ಕಾಲೇಜಿಗೂ ಹೈಸ್ಪೀಡ್‌ ಇಂಟರ್‌ನೆಟ್‌ ಸೌಲಭ್ಯ ಒದಗಿಸಲಾಗುವುದು. ಡಿಜಿಟಲ್‌ ಕಲಿಕೆಗಾಗಿ ಸಮಗ್ರ ಕಲಿಕಾ ವ್ಯವಸ್ಥೆ (ಎಲ್‌ಎಂಎಸ್‌) ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಟ್ಯಾಬ್ ವಿತರಿಸಲಾಗುವುದು’ ಎಂದರು.

‘ಈ ಉಪಕ್ರಮಗಳ ಮೂಲಕ ಸರ್ಕಾರಿ ಕಾಲೇಜುಗಳು ಖಾಸಗಿ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜತೆ ಮಾತ್ರವಲ್ಲ, ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆಗೂ ಪೈಪೋಟಿ ನಡೆಸಲು ಸಮರ್ಥವಾಗಲಿವೆ’ ಎಂದರು.

ಖಾಲಿ ಹುದ್ದೆ ಭರ್ತಿಗೆ ಕ್ರಮ:‘ಖಾಲಿ ಇರುವ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜು ಬೋಧಕರ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಬಜೆಟ್‌ ಪೂರ್ವ ಸಭೆಯಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗಳಗೆ ಮನವಿ ಸಲ್ಲಿಸಲಾಗಿದೆ. ಅವರೂ ಈ ಬಗ್ಗೆ ಪೂರಕವಾಗಿ ಸ್ಪಂದಿಸಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.

***
ಮೀಸಲು ಪ್ರಮಾಣ ಹೆಚ್ಚಳಕ್ಕೆ ಎಲ್ಲರ ಬೇಡಿಕೆ ಸಹಜ. ವೈಜ್ಞಾನಿಕವಾಗಿ, ನ್ಯಾಯ ಸಮ್ಮತವಾಗಿ ಸಿಗಬೇಕಾದವರಿಗೆ ಈ ಸೌಲಭ್ಯ ನೀಡಲು ಸರ್ಕಾರ ಪ್ರಯತ್ನಿಸಲಿದೆ.
-ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT