ಮಂಗಳವಾರ, ಏಪ್ರಿಲ್ 20, 2021
29 °C

ಗ್ರಾ.ಪಂ. ಚುನಾವಣೆ: ಶೇ 81ರಷ್ಟು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 2,709 ಗ್ರಾಮ ಪಂಚಾಯಿತಿಗಳ 39,378 ಸದಸ್ಯರ ಆಯ್ಕೆಗೆ ಭಾನುವಾರ ನಡೆದ ಮತದಾನದಲ್ಲಿ ಅಂದಾಜು ಶೇ 81ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗಕ್ಕೆ ಲಭಿಸಿರುವ ಪ್ರಾಥಮಿಕ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತ್ಯಧಿಕ ಶೇ 91.86ರಷ್ಟು ಮತದಾನವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇ 89.58ರಷ್ಟು ಮತದಾರರು ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಕೊನೆಯ ಸ್ಥಾನದಲ್ಲಿದ್ದು, ಶೇ 67.48ರಷ್ಟು ಮತದಾನವಾಗಿದೆ. ರಾಜ್ಯದಾದ್ಯಂತ ಬಹುತೇಕ ಶಾಂತಿಯುತ ಮತದಾನ ನಡೆದಿದೆ.

ಮತಪತ್ರದಲ್ಲಿ ಚಿಹ್ನೆ ಬದಲಾವಣೆಯಾಗಿದ್ದ ಕಾರಣದಿಂದ ಬೆಳಗಾವಿ ಜಿಲ್ಲೆಯ ಕದಂಪುರ ಮತ್ತು ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮ ಪಂಚಾಯಿತಿಗಳಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ.

ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಕಾರಣದಿಂದ ಆಕ್ರೋಶಗೊಂಡ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಡಸಲನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿದರು. ಮತದಾರರ ಪಟ್ಟಿಯಲ್ಲಿನ ಲೋಪಗಳ ಕಾರಣಕ್ಕಾಗಿ ಧಾರವಾಡ ಜಿಲ್ಲೆಯ ನವಲಗುಂದ ಮತ್ತು ಹುಬ್ಬಳ್ಳಿ ತಾಲ್ಲೂಕಿನ 6 ಮತಗಟ್ಟೆಗಳಲ್ಲಿ ಮತದಾನ ಬಹಿಷ್ಕರಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು