ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.26ರಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

Last Updated 24 ನವೆಂಬರ್ 2020, 20:47 IST
ಅಕ್ಷರ ಗಾತ್ರ

ಬೆಂಗಳೂರು: 2021ರ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲುಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ, ಅಕ್ಷರ ಜಾತ್ರೆ ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಕಾರ್ಯಕಾರಿ ಸಮಿತಿ ಸಭೆಯು ಸರ್ವಾನುಮತದಿಂದ ಇದಕ್ಕೆ ಒಪ್ಪಿಗೆ ಸೂಚಿಸಿತು.

ಇದಕ್ಕೂ ಮೊದಲು ದಿನಾಂಕ ನಿಗದಿ ಸಂಬಂಧ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವರಾಗಿರುವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ಚರ್ಚಿಸಲಾಯಿತು ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT