ಶನಿವಾರ, ನವೆಂಬರ್ 26, 2022
21 °C
ಪರಿಷ್ಕೃತ ಲಾಂಛನ ಬಿಡುಗಡೆ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನದಲ್ಲಿ ಮಾರ್ಪಾಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿದ್ದ ಕನಕದಾಸ, ಸರ್ವಜ್ಞ, ಶಿಶುನಾಳ ಷರೀಫ ಮುಂತಾದ ಮಹನೀಯರ ಭಾವಚಿತ್ರಗಳನ್ನು ಕೈಬಿಟ್ಟು, ಕೆಲ ಮಾರ್ಪಾಡುಗಳೊಂದಿಗೆ ಪರಿಷ್ಕೃತ ಲಾಂಛನವನ್ನು ಕಸಾಪ ಅಧ್ಯಕ್ಷ ಮಹೇಶ ಜೋಶಿ ಬುಧವಾರ ಬಿಡುಗಡೆ ಮಾಡಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತ ನಾಡಿದ ಮಹೇಶ ಜೋಶಿ, ಅ.29ರಂದು ಹಾವೇರಿಯಲ್ಲಿ ಲಾಂಛನ ಬಿಡುಗಡೆ ಮಾಡಿದ ಬಳಿಕ, ಸಂತ–ಕವಿ–ಸ್ವಾತಂತ್ರ್ಯ ಹೋರಾಟಗಾರರ ಮತ್ತಷ್ಟು ಭಾವಚಿತ್ರ ಗಳನ್ನು ಸೇರ್ಪಡೆ ಮಾಡುವಂತೆ ಬೇಡಿಕೆಗಳು ಬಂದಿದ್ದವು.  ಎಲ್ಲರನ್ನೂ ಲಾಂಛನದಲ್ಲಿ ಸೇರಿಸಲು ಸಾಧ್ಯವಾಗದ ಕಾರಣ, ಹಾವೇರಿ ಜಿಲ್ಲೆಯನ್ನು ಪ್ರತಿ ನಿಧಿಸುವ ಮಹನೀಯರ ಚಿತ್ರಗಳನ್ನು ಕೈಬಿಟ್ಟು, ಜಿಲ್ಲೆಯ ಐತಿಹಾಸಿಕ ಸ್ಥಳ, ಸಾಂಸ್ಕೃತಿಕ ಅಸ್ಮಿತೆ ಬಿಂಬಿಸಿ ಮಾರ್ಪಾಡು ಮಾಡಲಾಗಿದೆ. ನಗರದ ಹೊರವಲಯದ ಅಜ್ಜಯ್ಯನ ದೇವಸ್ಥಾನ ಹತ್ತಿರದ 80 ಎಕರೆಯಲ್ಲಿ ಸಮ್ಮೇಳನಕ್ಕೆ ಸ್ಥಳ ನಿಗದಿಪಡಿಸಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು